`ಡಿಕೆಶಿಗೆ’ ಕೆಪಿಸಿಸಿ ಕಂಡ ಅತ್ಯಂತ “ಅಸಹಾಯಕ ಅಧ್ಯಕ್ಷ ಪಟ್ಟ” D K shivakumar saaksha tv
ಬೆಂಗಳೂರು : ಬಹುಶಃ ಕೆಪಿಸಿಸಿ ಕಂಡ ಅತ್ಯಂತ ಅಸಹಾಯಕ ಅಧ್ಯಕ್ಷ ಎಂಬ ಪಟ್ಟ ಡಿ.ಕೆ.ಶಿವಕುಮಾರ್ ಅವರಿಗೆ ಒಲಿದು ಬರಬಹುದು ಎಂದು ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ.
ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರವಾಗಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಸಿದ್ದರಾಮಯ್ಯ ಅವರ ಮೊದಲ ದೆಹಲಿ ಭೇಟಿ ಡಿಕೆಶಿ ಮಾಡಿದ ಪದಾಧಿಕಾರಿಗಳ ಪಟ್ಟಿಯನ್ನು ನಿರ್ಲಕ್ಷ್ಯ ಮಾಡುವಂತೆ ಮಾಡಿತು. ಎರಡನೇ ಭೇಟಿ ಪದಾಧಿಕಾರಿಗಳ ಪಟ್ಟಿಯನ್ನೇ ತಿರಸ್ಕರಿಸುವಂತೆ ಮಾಡಿತು. ಸಿದ್ದರಾಮಯ್ಯ ಅವರ ಮೂರನೇ ಭೇಟಿ ಡಿಕೆಶಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ ಎಂದು ವ್ಯಂಗ್ಯವಾಡಿದೆ.
ಬಹುಶಃ ಕೆಪಿಸಿಸಿ ಕಂಡ ಅತ್ಯಂತ ಅಸಹಾಯಕ ಅಧ್ಯಕ್ಷ ಎಂಬ ಪಟ್ಟ ಡಿ.ಕೆ.ಶಿವಕುಮಾರ್ ಅವರಿಗೆ ಒಲಿದು ಬರಬಹುದು. ತಮ್ಮ ವಿರುದ್ಧ ಸಂಚು ರೂಪಿಸಿದ ವ್ಯಕ್ತಿಯ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವುದಕ್ಕೂ ಡಿಕೆಶಿ ಅಳುಕುತ್ತಿದ್ದಾರೆ. ಡಿಕೆಶಿ ಎದುರು ಸಿದ್ದರಾಮಯ್ಯ ಕೈ ಮೇಲಾಯಿತೇ?
ಪಿಸುಮಾತು ಪ್ರಕರಣ ಸಂಬಂಧ ಉಪಚುನಾವಣೆ ಮುಗಿದ ಬಳಿಕ ಉತ್ತರ ಕೊಡುತ್ತೇನೆ ಎಂದಿದ್ದ ಡಿ.ಕೆ.ಶಿವಕುಮಾರ್ ಈಗ ಮೆತ್ತಗಾಗಿ ಬಿಟ್ಟಿದ್ದಾರೆ. ಸಿದ್ದರಾಮಯ್ಯ ಬಣದ ಉಗ್ರಪ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡರೆ ಎಲ್ಲಿ ಅಧ್ಯಕ್ಷ ಪಟ್ಟ ಕೈ ತಪ್ಪುತ್ತದೆಯೆಂಬ ಭಯವೇ? ಸಿದ್ದರಾಮಯ್ಯ ದಿಲ್ಲಿ ಪ್ರವಾಸದಿಂದ ಡಿಕೆಶಿ ಕುಗ್ಗಿ ಹೋಗಿದ್ದಾರೆಯೇ ಎಂದು ಕುಟುಕಿದೆ.









