ಯಾರೇ ಆದರೂ ಈ ಬಾರಿ ಒಬ್ಬರಿಗೆ ಒಂದೇ ಟಿಕೆಟ್ – ಡಿ ಕೆ ಶಿವಕುಮಾರ್…
ವ್ಯಕ್ತಿ ಮುಖ್ಯ ಅಲ್ಲ ಪಕ್ಷ ಮುಖ್ಯ ಈ ಬಾರಿ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಈ ಮೂಲಕ ಕಳೆದ ಭಾರಿಯಂತೆ ಮಾಜಿ ಸಿ ಎಂ ಸಿದ್ದರಾಮಯ್ಯ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಾರೆ ಎಂಬ ಚರ್ಚೆಗೆ ಡಿ ಕೆ ಶಿವಕುಮಾರ್ ಅಂತ್ಯ ಹಾಡಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅರ್ಜಿ ಸಲ್ಲಿಸುವಾಗ ದೇಣಿಗೆ ಸಂಗ್ರಹವಿಚಾರದ ಕುರಿತಂತೆ ಮಾತನಾಡಿ ಅರ್ಜಿ ಆಹ್ವಾನ, ದೇಣಿಗೆ ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಆದರೆ, ಈ ಬಾರಿ ಹೆಚ್ಚು ಸದ್ದು ಆಗಿದೆ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಸೇರಿ ಹಲವು ವಿಚಾರವಾಗಿ ಆರ್ಥಿಕ ಶಕ್ತಿ ಅಗತ್ಯವಿದೆ. ಕಚೇರಿ ನಿರ್ಮಾಣಕ್ಕೆ ಕಾರ್ಯಕರ್ತರು ಆರ್ಥಿಕ ನೆರವು ಕೇಳಿದಾಗ ನಾವು ಹಣ ಸಹಾಯ ಮಾಡುತ್ತೇವೆ. ಕಾರ್ಯಕರ್ತರಿಗೆ ತೊಂದರೆ ಆದಾಗ ಅವರಿಗೆ ಸಹಾಯ ಮಾಡಲು ಹಣದ ಅಗತ್ಯವಿದೆ. ಹೀಗಾಗಿ ದೇಣಿಗೆಯನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆ ನಂತರ ಆಕಾಂಕ್ಷಿಗಳು ಸಿದ್ದರಾಮಯ್ಯ ಹಾಗೂ ನಿಮ್ಮ ಮನೆಗೆ ಭೇಟಿ ನೀಡುತ್ತಿರುವುದರಿಂದ ತೊಂದರೆ ಆಗುವುದಿಲ್ಲವೇ ಎಂದು ಕೇಳಿದ ಪ್ರಶ್ನೆಗೆ, ‘ಯಾರೇ ಆಗಲಿ ಒಬ್ಬರಿಗೆ ಒಂದೇ ಟಿಕೆಟ್. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ ಎಂದು ಹೇಳಿದ್ದಾರೆ.
D K shivakumar : Only 1 ticket per person from upcoming election, DK Shivakumar