ನಾವೂ ಜಾತಿ ಮೇಲೆ ರಾಜಕಾರಣ ಮಾಡಲ್ಲ : ಡಿ.ಕೆ.ಶಿವಕುಮಾರ್

1 min read
D K Shivakumar

ನಾವೂ ಜಾತಿ ಮೇಲೆ ರಾಜಕಾರಣ ಮಾಡಲ್ಲ : ಡಿ.ಕೆ.ಶಿವಕುಮಾರ್ D K Shivakumar

ಬೆಳಗಾವಿ : ನಾವು ಜಾತಿ ಮೇಲೆ ರಾಜಕಾರಣ ಮಾಡಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೂ ಜಾತಿ ಮೇಲೆ ರಾಜಕಾರಣ ಮಾಡಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತೇವೆ.

ಲಿಂಗಾಯತರು ನಮ್ಮವರೇ, ಮರಾಠರು ನಮ್ಮ ಅಣ್ಣ-ತಮ್ಮಂದಿರಂತೆ. ನಮಗೆ ಎಲ್ಲರೂ ಒಂದೇ. ಬಿಜೆಪಿಯವರೇ ಅವರನ್ನು ಬೇರೆಬೇರೆ ಮಾಡುತ್ತಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಹಕ್ಕು ಹೊಂದಿರುವ ಎಲ್ಲರೂ ಒಂದೇ ಎಂದರು.

D K Shivakumar

ಇನ್ನು ಸತೀಶ್ ಜಾರಕಿಹೊಳಿ ಅವರನ್ನ ಬೆಂಬಲಿಸುವಂತೆ ಕೋರಿ ಕಮ್ಯೂನಿಷ್ಟ್ ಪಕ್ಷಗಳ ನಾಯಕರು, ರೈತ ಸಂಘಟನೆಗಳ ಸಂಪರ್ಕಿಸುತ್ತಿದ್ದೇನೆ.

ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದ ಡಿಕೆಶಿ, ದೆಹಲಿಯಲ್ಲಿ ನೂರಾರು ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇಂದ್ರ ಸರ್ಕಾರದ ನೀತಿ ಬಗ್ಗೆ ರೈತರಿಗೆ ಆಕ್ರೋಶವಿದೆ. ಮಸ್ಕಿ, ಬೆಳಗಾವಿ ಹಾಗೂ ಬಸವಕಲ್ಯಾಣದಲ್ಲಿ ರೈತರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ.

ಇದನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಬೆಂಬಲಿಸುವಂತೆ ಕೋರಿದ್ದೇವೆ ಎಂದು ತಿಳಿಸಿದರು.

parking
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd