ಬಿಜೆಪಿಯವರು ಏನಾದ್ರೂ ಮಾಡಿಕೊಳ್ಳಲಿ ನಮಗೆ ಜನ ಮುಖ್ಯ : ಡಿ.ಕೆ.ಶಿವಕುಮಾರ್
ಬೆಂಗಳೂರು : ಬಿಜೆಪಿಯವರು ಏನಾದರೂ ಮಾಡಿಕೊಳ್ಳಲಿ. ಕೊರೊನಾ ಸಂದರ್ಭದಲ್ಲಿ ನಮಗೆ ಜನರ ಜೀವ ಉಳಿಯಬೇಕು.
ನಾಯಕತ್ವದ ಬದಲಾವಣೆ ಬಿಜೆಪಿ ಪಾರ್ಟಿ ವಿಚಾರ. ನಮಗೂ ಈ ಪಾರ್ಟಿ ವಿಚಾರಕ್ಕೂ ಸಂಬಂಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಯಡಿಯೂರಪ್ಪನವರು ಸಿಎಂ ಸ್ಥಾನದಿಂದ ಕೆಳಗಿಳಿಯಲಿ ಎಂಬ ಹೆಚ್ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, ಇದು ಬಿಜೆಪಿ ಪಾರ್ಟಿ ವಿಚಾರ.
ನಮಗೂ ಈ ಪಾರ್ಟಿ ವಿಚಾರಕ್ಕೂ ಸಂಬಂಧವಿಲ್ಲ. ಬಿಜೆಪಿಯವರು ಬಿಎಸ್ ವೈ ನಾದ್ರೂ ಇಟ್ಕೊಳ್ಳಲಿ, ವಿಶ್ವನಾಥ್ ರನ್ನಾದ್ರೂ ಮಾಡಲಿ, ಈಶ್ವರಪ್ಪನವರಾನ್ನಾದ್ರೂ ಮಾಡಿಕೊಳ್ಳಲಿ. ನಮಗೆ ಕೊರೊನಾ ಸಂದರ್ಭದಲ್ಲಿ ಜನರ ಜೀವ ಉಳಿಯಬೇಕು ಅಷ್ಟೆ ಎಂದರು.
ಇದೇ ವೇಳೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಡಿಕೆಶಿ, ಅರುಣ್ ಸಿಂಗ್ ಅವರೇ ಬಿಎಸ್ ವೈ ಸರ್ಕಾರ ಕೊರೊನಾ ಸಂದರ್ಭದಲ್ಲಿ ಉತ್ತಮ ಕೆಲಸ ಮಾಡಿದೆ ಅಂತೀರಲ್ಲ.
36 ಜನ ಮರ್ಡರ್ ಮಾಡಿದ್ದಾರೆ. ಇಲ್ಲಿ ಒಬ್ಬರ ಮೇಲೂ ಎಫ್ ಐ ಆರ್ ಹಾಕಿಲ್ಲ. ಇದು ಉತ್ತಮ ಕೆಲಸವೇ..? ಆಕ್ಸಿಜನ್ ಐಸಿಯು ಇಲ್ಲದೇ ಜನ ಸತ್ತಿದ್ದಾರೆ.
ಇದು ಉತ್ತಮ ಕೊರೊನಾ ನಿರ್ವಹಣೆಯೇ..? ಎಲ್ಲದಕ್ಕೂ ಕೋರ್ಟ್ ಮಧ್ಯಪ್ರವೇಶಿಸಿ ನಿಮಗೆ ತರಾಟೆಗೆ ತೆಗೆದುಕೊಂಡಿರೋದು ಎಂದು ಕಿಡಿಕಾರಿದರು.









