ಧಾರವಾಡ : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K.Shivakumar) ಅವರ ಮನೆ ಮೇಲೆ ಸಿಬಿಐ ದಾಳಿ ಮಾಡಿದ್ದು ಸ್ವಾಗತಾರ್ಹ ಎಂದು ಸಾಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ( S R Hiremath) ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರೇಮಠ ( S R Hiremath), ಡಿ.ಕೆ.ಶಿವಕುಮಾರ್ (D.K.Shivakumar) ಅವರು ಸಾರ್ವಜನಿಕರ ಹಣವನ್ನು ಗಳಿಸಿದ್ದು, ಅವರ ಮೇಲೆ ಎಫ್ ಐಆರ್ ದಾಖಲಿಸಬೇಕು.
ಅವರ ಅಕ್ರಮ ಸಂಪಾದನೆ ಮೇಲೆ ಸಿಬಿಯ ದಾಳಿ ಮಾಡಿರುವುದು ಬಹಳ ಮಹತ್ವದ ವಿಷಯ. ಅವರ ಪರವಾಗಿ ಈ ಕಾಂಗ್ರೆಸ್ಸಿನವರು ಪ್ರತಿಭಟನೆ ಮಾಡುವುದನ್ನು ಬಂದ್ ಮಾಡಬೇಕು ಎಂದರು.
ಇದನ್ನೂ ಓದಿ : ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ : ಕೈ ಅಭ್ಯರ್ಥಿ ರಮೇಶ್ ಬಾಬು ನಾಮಪತ್ರ
ಇದೇ ವೇಳೆ ಆರೋಗ್ಯ ಸಚಿವ ಶ್ರೀ ರಾಮುಲು ಅವರ ಬಗ್ಗೆ ಮಾತನಾಡಿದ ಅವರು, ರಾಮುಲು ಅವರಿಗೆ 100 ಕೋಟಿ ರೂಪಾಯಿ ಮೌಲ್ಯದ ಮನೆ ಕಟ್ಟಲು ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸದರು.
ಅಲ್ಲದೆ ನಾವು ಈಗಾಗಲೇ ಈ ರೀತಿ ಅಕ್ರಮ ಸಂಪಾದನೆ ಮಾಡಿದವರ ಬಗ್ಗೆ ಪ್ರಧಾನಿಗೆ ಪತ್ರ ಬರೆದಿದ್ದೇವೆ ಎಂದು ತಿಳಿಸಿದರು..