ನಮ್ಮದು ವ್ಯಕ್ತಿ ಚಿಂತನೆ ಅಲ್ಲ : ಪರಿಸರವಾದಿಗಳಿಗೆ ಡಿಕೆಶಿ ಟಾಂಗ್

1 min read
DK Shivakumar

ನಮ್ಮದು ವ್ಯಕ್ತಿ ಚಿಂತನೆ ಅಲ್ಲ : ಪರಿಸರವಾದಿಗಳಿಗೆ ಡಿಕೆಶಿ ಟಾಂಗ್

ಬೆಂಗಳೂರು : ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ಪಾದಯಾತ್ರೆ ನಡೆಸಿ ಹೋರಾಟ ಮಾಡುತ್ತಿದೆ.  ರಾಜ್ಯ ಬಿಜೆಪಿ ಸರ್ಕಾರ ಮೇಕೆದಾಟು ಯೋಜನೆಯನ್ನು ಮಾಡಿಯೇ ತೀರುತ್ತೇವೆ ಎಂದು ಭರವಸೆ ನೀಡುತ್ತಿದೆ. ಈ ಮಧ್ಯೆ ಪರಿಸರವಾದಿಗಳು ಈ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ನರ್ಮದಾ ಬಚಾವ್ ಆಂದೋಲನದ ಹೋರಾಟಗಾರ್ತಿ ಮೇಧಾ ಪಾಟ್ಕರ್, ನಟ ಚೇತನ್ ಅಹಿಂಸಾ ಸೇರಿದಂತೆ ಇನ್ನಿತರ ಪರಿಸರವಾದಿಗಳು ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ  ಈ ಯೋಜನೆಯಿಂದ ಯಾರಿಗೂ ಲಾಭವಿಲ್ಲ ಎಂದು ಹೇಳಿದ್ದಾರೆ.

D K shivakumar Tong  saaksha tv

ಈ ವಿಚಾರವಾಗಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಮೇಧಾ ಪಾಟ್ಕರ್ ಅವರು ಅವರದ್ದೇ ಆದ ಚಿಂತನೆಯಲ್ಲಿ ಹೋರಾಟವನ್ನು ಮಾಡುತ್ತಿದ್ದಾರೆ. ಆದರೆ ನಮ್ಮದು ಜನರ ಚಿಂತನೆಯಾಗಿದೆ ಎಂದು ಹೇಳಿದ್ದಾರೆ.

ಅಲ್ಲದೇ ಮೇಧಾ ಪಾಟ್ಕರ್‌ ಅವರಿಗೆ ನಾನು ಯಾಕೆ ಉತ್ತರ ಕೊಡಲಿ ಎಂದು ಪ್ರಶ್ನಿಸಿದ್ದು, ಸಿಎಂ ಸರ್ಕಾರ ಉತ್ತರ ಕೊಡುತ್ತಾರೆ ಎಂದಿದ್ದಾರೆ ಡಿ.ಕೆ.ಶಿವಕುಮಾರ್.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd