ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇದರಿಂದ ಜನರಲ್ಲಿ ಭೀತಿ ಹೆಚ್ಚಾಗಿದೆ. ಹಾಗಾಗಿ ದೇಶದ ಉದ್ದಗಲಕ್ಕೂ ಸಾಕಷ್ಟು ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೊರೊನಾ ವೈರಸ್ ಆತಂಕದಿ0ದಾಗಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿಯ ಕೊನೆಯ ಎರಡು ಪಂದ್ಯಗಳನ್ನು ರದ್ದುಗೊಳಿಸಲಾಗಿತ್ತು. ಇದೀಗ ಈಡನ್ ಗಾರ್ಡನ್ಸ್ನಲ್ಲಿ ನಡೆಯಬೇಕಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯವನ್ನು ಬಿಸಿಸಿಐ ಮುಂದೂಡಿದೆ. ಬಿಸಿಸಿಐನ ಈ ತೀರ್ಮಾನಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಸಮಾಧಾನ ಹೊರಹಾಕಿದ್ದಾರೆ. ತಮ್ಮ ಸರ್ಕಾರದ ಗಮನಕ್ಕೆ ತರದೆ ಪಂದ್ಯವನ್ನು ರದ್ದು ಮಾಡಿದ್ದು, ದೀದಿ ಕೋಪಕ್ಕೆ ಕಾರಣವಾಗಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ವಿರುದ್ಧ ಕಿಡಿ ಕಾರಿದ ಅವರು, ‘ನೀವು ತೆಗೆದುಕೊಂಡಿರುವ ಎಲ್ಲ ನಿರ್ಧಾರಗಳು ಸರಿಯಾಗಿಯೇ ಇವೆ ಸೌರವ್. ಆದರೆ, ಪಂದ್ಯವನ್ನು ಮುಂದೂಡುವ ಮೊದಲು ಸರಕಾರಕ್ಕೆ ಯಾಕೆ ಒಂದು ಸಣ್ಣ ಮಾಹಿತಿ ನೀಡಿಲ್ಲ. ಸರಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಆಯುಕ್ತರು ಅಥವಾ ಸರಕಾರದ ಪರವಾಗಿ ಇರುವ ಇನ್ಯಾರಿಗಾದರೂ ಮೊದಲು ಮಾಹಿತಿ ಕೊಡಬಹುದಿತ್ತಲ್ಲವೇ? ಎಲ್ಲ ಮುಗಿದ ಬಳಿಕ ಮಾಹಿತಿ ನೀಡುವುದು ಯಾವ ರೀತಿಯಲ್ಲಿ ಸರಿ” ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಯಲ್ಲಿ ಬಿರುಕು: ಅತೃಪ್ತ ನಾಯಕರ ‘ಬಣ’ ಕದನ
ಕರ್ನಾಟಕದ ಬಿಜೆಪಿ ಘಟಕದಲ್ಲಿ ಬಣ ರಾಜಕೀಯ ಮತ್ತೆ ಮುಂದುವರೆದಿದೆ. ಪಕ್ಷದೊಳಗಿನ ಅತೃಪ್ತ ನಾಯಕರು ಮಾಜಿ ಸಚಿವ ಕುಮಾರ್ ಬಂಗಾರಪ್ಪನವರ ನಿವಾಸದಲ್ಲಿ ಸಭೆ ಸೇರಿದ್ದು, ಈ ಸಭೆ ಹಲವು...