ದಿನ ಭವಿಷ್ಯ: 03-02-2026
ಮೇಷ ರಾಶಿ
ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಿರಲಿದ್ದು ತಾಳ್ಮೆ ಅವಶ್ಯಕ. ಆರ್ಥಿಕವಾಗಿ ಸಾಧಾರಣ ದಿನ. ಕುಟುಂಬದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮೂಡಬಹುದು, ಮೌನವಾಗಿರುವುದು ಒಳಿತು. ಆರೋಗ್ಯದ ಕಡೆಗೆ ಗಮನ ಹರಿಸಿ. ಸುಬ್ರಹ್ಮಣ್ಯನ ಆರಾಧನೆ ಮಾಡಿ.
ವೃಷಭ ರಾಶಿ
ವ್ಯಾಪಾರ ಮತ್ತು ವ್ಯವಹಾರದಲ್ಲಿ ಧನ ಲಾಭವಾಗುವ ಸಾಧ್ಯತೆ ಇದೆ. ಹಳೆಯ ಸ್ನೇಹಿತರ ಭೇಟಿ ಮನಸ್ಸಿಗೆ ಸಂತೋಷ ನೀಡುತ್ತದೆ. ಮನೆಯಲ್ಲಿ ಶುಭ ಕಾರ್ಯಗಳ ಬಗ್ಗೆ ಚರ್ಚೆ ನಡೆಯಲಿದೆ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗ್ರತೆ ಮೂಡಲಿದೆ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ಲಕ್ಷ್ಮೀ ದೇವಿಯ ಪ್ರಾರ್ಥನೆ ಮಾಡಿ.
ಮಿಥುನ ರಾಶಿ
ದೂರದ ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಬಹುದು, ಎಚ್ಚರಿಕೆ ವಹಿಸಿ. ಕಚೇರಿಯಲ್ಲಿ ಮೇಲಾಧಿಕಾರಿಗಳ ಪ್ರಶಂಸೆ ದೊರೆಯಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ ಆದರೆ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ.
ಕರ್ಕಾಟಕ ರಾಶಿ
ಮನಸ್ಸಿನಲ್ಲಿ ಗೊಂದಲಗಳು ಮೂಡಬಹುದು. ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಹಿರಿಯರ ಸಲಹೆ ಪಡೆಯುವುದು ಉತ್ತಮ. ರಿಯಲ್ ಎಸ್ಟೇಟ್ ವ್ಯವಹಾರಸ್ಥರಿಗೆ ಲಾಭದ ದಿನ. ತಾಯಿ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಕೋಪವನ್ನು ನಿಯಂತ್ರಿಸಿಕೊಳ್ಳಿ. ಶಿವನ ದೇವಾಲಯಕ್ಕೆ ಭೇಟಿ ನೀಡಿ.
ಸಿಂಹ ರಾಶಿ
ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಸರ್ಕಾರಿ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗಲಿದೆ. ಹೊಸ ವಾಹನ ಅಥವಾ ಆಸ್ತಿ ಖರೀದಿಸುವ ಯೋಗವಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಸೂರ್ಯ ನಮಸ್ಕಾರ ಮಾಡುವುದು ಒಳ್ಳೆಯದು.
ಕನ್ಯಾ ರಾಶಿ
ಬರಬೇಕಾದ ಹಳೆಯ ಬಾಕಿ ಹಣ ಕೈ ಸೇರಲಿದೆ. ಕೋರ್ಟು ಕಚೇರಿ ಕೆಲಸಗಳಲ್ಲಿ ಜಯ ಸಿಗಲಿದೆ. ಸಹೋದರರೊಂದಿಗೆ ಬಾಂಧವ್ಯ ವೃದ್ಧಿಯಾಗಲಿದೆ. ಕಲಾ ಕ್ಷೇತ್ರಗಳಲ್ಲಿ ಇರುವವರಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಗಣಪತಿಯನ್ನು ಆರಾಧಿಸಿ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಜ್ಯೋತಿಷ್ಯಶಾಸ್ತ್ರತಜ್ಞರು 8548998564
ತುಲಾ ರಾಶಿ
ಪಾಲುದಾರಿಕೆ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ. ಉದ್ಯೋಗ ಸ್ಥಳದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ. ಆರೋಗ್ಯ ಉತ್ತಮವಾಗಿರುತ್ತದೆ. ದಂಪತಿಗಳ ನಡುವೆ ಅನ್ಯೋನ್ಯತೆ ಹೆಚ್ಚಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ನವಗ್ರಹ ಪ್ರದಕ್ಷಿಣೆ ಮಾಡಿ.
ವೃಶ್ಚಿಕ ರಾಶಿ
ಇಂದು ನಿಮಗೆ ಅದೃಷ್ಟದ ದಿನ. ಅಂದುಕೊಂಡ ಕೆಲಸಗಳು ಸುಲಲಿತವಾಗಿ ನೆರವೇರಲಿವೆ. ಹಣಕಾಸಿನ ಹರಿವು ಉತ್ತಮವಾಗಿರುತ್ತದೆ. ಕೃಷಿ ಮತ್ತು ಭೂಮಿಗೆ ಸಂಬಂಧಿಸಿದ ಕೆಲಸಗಳಲ್ಲಿ ಲಾಭ ದೊರೆಯಲಿದೆ. ಶತ್ರುಗಳ ಕಾಟ ಕಡಿಮೆಯಾಗಲಿದೆ. ಹನುಮಾನ್ ಚಾಲೀಸಾ ಪಠಿಸಿ.
ಧನು ರಾಶಿ
ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಅವಕಾಶಗಳು ಸಿಗಲಿವೆ. ಗುರು ಹಿರಿಯರ ಆಶೀರ್ವಾದ ನಿಮ್ಮ ಮೇಲಿರುತ್ತದೆ. ಹೊಸ ಉದ್ಯೋಗದ ಹುಡುಕಾಟದಲ್ಲಿರುವವರಿಗೆ ಶುಭ ಸುದ್ದಿ ಸಿಗಬಹುದು. ಆಹಾರದ ವಿಚಾರದಲ್ಲಿ ಎಚ್ಚರಿಕೆ ವಹಿಸಿ. ದತ್ತಾತ್ರೇಯನ ಸ್ಮರಣೆ ಮಾಡಿ.
ಮಕರ ರಾಶಿ
ಕೆಲಸದ ಸ್ಥಳದಲ್ಲಿ ಜವಾಬ್ದಾರಿಗಳು ಹೆಚ್ಚಾಗಲಿವೆ. ಅನಾವಶ್ಯಕ ವಾದ ವಿವಾದಗಳಿಂದ ದೂರವಿರಿ. ವಾಹನ ಚಾಲನೆ ಮಾಡುವಾಗ ಎಚ್ಚರಿಕೆ ಇರಲಿ. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶನಿ ದೇವರನ್ನು ಪ್ರಾರ್ಥಿಸಿ.
ಕುಂಭ ರಾಶಿ
ಹೊಸ ಯೋಜನೆಗಳನ್ನು ಆರಂಭಿಸಲು ಇದು ಸೂಕ್ತ ಸಮಯ. ಸ್ನೇಹಿತರ ಸಹಾಯದಿಂದ ಕಷ್ಟಗಳು ದೂರವಾಗಲಿವೆ. ಆರ್ಥಿಕವಾಗಿ ಸದೃಢರಾಗುವಿರಿ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಆಧ್ಯಾತ್ಮಿಕ ಚಿಂತನೆಗಳಲ್ಲಿ ಮನಸ್ಸು ನೆಮ್ಮದಿ ಕಾಣಲಿದೆ. ರುದ್ರಭಿಷೇಕ ಮಾಡಿಸುವುದು ಒಳಿತು.
ಮೀನ ರಾಶಿ
ವಿದೇಶ ಪ್ರಯಾಣದ ಯೋಗವಿದೆ. ಖರ್ಚುಗಳು ಆದಾಯಕ್ಕಿಂತ ಹೆಚ್ಚಾಗಬಹುದು, ಉಳಿತಾಯದ ಕಡೆ ಗಮನ ಕೊಡಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಕಲೆ ಮತ್ತು ಸಾಹಿತ್ಯದಲ್ಲಿ ಆಸಕ್ತಿ ಹೆಚ್ಚಲಿದೆ. ಗುರು ರಾಘವೇಂದ್ರ ಸ್ವಾಮಿಗಳ ಆರಾಧನೆ ಮಾಡಿ.








