ದಿನ ಭವಿಷ್ಯ : 25-05-2026
ಮೇಷ ರಾಶಿ
ಮೇಷ ರಾಶಿಯವರಿಗೆ ಇಂದು ಹೊಸ ಕೆಲಸಗಳನ್ನು ಆರಂಭಿಸಲು ಅತ್ಯಂತ ಶುಭ ದಿನವಾಗಿದೆ. ವ್ಯಾಪಾರ ಮತ್ತು ವ್ಯವಹಾರಗಳಲ್ಲಿ ಧನಲಾಭದ ಯೋಗವಿದೆ. ಕುಟುಂಬದ ಸದಸ್ಯರೊಂದಿಗೆ ಇದ್ದ ಭಿನ್ನಾಭಿಪ್ರಾಯಗಳು ದೂರವಾಗಲಿವೆ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಮೇಲಧಿಕಾರಿಗಳಿಂದ ಮೆಚ್ಚುಗೆ ದೊರೆಯಲಿದೆ. ನಿಮ್ಮ ಆರೋಗ್ಯದ ಬಗ್ಗೆ ಅಲ್ಪ ಕಾಳಜಿ ಇರಲಿ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗುವ ಸಾಧ್ಯತೆ ಇದೆ.
ವೃಷಭ ರಾಶಿ
ವೃಷಭ ರಾಶಿಯವರು ಇಂದು ಆರ್ಥಿಕ ವ್ಯವಹಾರಗಳಲ್ಲಿ ಜಾಗರೂಕರಾಗಿರಬೇಕು. ಹೂಡಿಕೆ ಮಾಡುವ ಮೊದಲು ನುರಿತವರ ಸಲಹೆ ಪಡೆಯುವುದು ಉತ್ತಮ. ನಿಮ್ಮ ಮಾತಿನ ಮೇಲೆ ಹಿಡಿತವಿರಲಿ ಇಲ್ಲವಾದರೆ ಆಪ್ತರೊಂದಿಗೆ ಮನಸ್ತಾಪ ಉಂಟಾಗಬಹುದು. ಶ್ರಮಕ್ಕೆ ತಕ್ಕ ಫಲ ತಡವಾಗಿ ಸಿಗಲಿದೆ. ದೂರದ ಪ್ರಯಾಣವನ್ನು ಕೈಗೊಳ್ಳುವಾಗ ಎಚ್ಚರಿಕೆ ವಹಿಸಿ. ದೇವತಾ ಆರಾಧನೆಯಿಂದ ಮನಸ್ಸಿಗೆ ಶಾಂತಿ ಸಿಗಲಿದೆ.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಇಂದು ಸೃಜನಶೀಲ ಕೆಲಸಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸಾಮರಸ್ಯ ಇರಲಿದ್ದು ಸಂಗಾತಿಯಿಂದ ಸಂಪೂರ್ಣ ಸಹಕಾರ ಸಿಗಲಿದೆ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆ ಇದೆ. ಆಸ್ತಿ ಖರೀದಿ ಮಾಡುವ ನಿಮ್ಮ ಪ್ರಯತ್ನಗಳು ಇಂದು ಯಶಸ್ವಿಯಾಗಲಿವೆ.
ಕಟಕ ರಾಶಿ
ಕಟಕ ರಾಶಿಯವರು ಇಂದು ಮಾನಸಿಕವಾಗಿ ಸ್ವಲ್ಪ ಗೊಂದಲಕ್ಕೊಳಗಾಗಬಹುದು. ಕೆಲಸದ ಒತ್ತಡ ಹೆಚ್ಚಾಗಿ ನಿಮ್ಮನ್ನು ದಣಿಸಬಹುದು. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಅವಶ್ಯಕ. ಸ್ನೇಹಿತರ ಸಹಾಯದಿಂದ ಅರ್ಧಕ್ಕೆ ನಿಂತಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದ್ದು ಹವಾಮಾನ ಬದಲಾವಣೆಯ ಬಗ್ಗೆ ಜಾಗ್ರತೆ ಇರಲಿ. ಮೌನವಾಗಿರುವುದು ನಿಮಗೆ ಲಾಭದಾಯಕವಾಗಲಿದೆ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಇಂದು ಅದೃಷ್ಟದ ದಿನವಾಗಿದೆ. ಸಾಮಾಜಿಕವಾಗಿ ನಿಮ್ಮ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗಲಿದೆ. ಬರಬೇಕಿದ್ದ ಬಾಕಿ ಹಣ ಇಂದು ನಿಮ್ಮ ಕೈ ಸೇರುವ ಸಾಧ್ಯತೆ ಇದೆ. ಪ್ರೇಮಿಗಳಿಗೆ ಇಂದು ಶುಭ ಸುದ್ದಿಯೊಂದು ಕಾದಿದೆ. ಹೊಸ ವಾಹನ ಅಥವಾ ಮನೆ ಖರೀದಿಯ ಯೋಗವಿದೆ. ತಂದೆಯ ಕಡೆಯಿಂದ ಆರ್ಥಿಕ ಸಹಾಯ ದೊರೆಯಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿರಿ.
ಕನ್ಯಾ ರಾಶಿ
ಕನ್ಯಾ ರಾಶಿಯವರು ಇಂದು ವೃತ್ತಿ ಜೀವನದಲ್ಲಿ ಸವಾಲುಗಳನ್ನು ಎದುರಿಸಬೇಕಾಗಬಹುದು. ಸಹೋದ್ಯೋಗಿಗಳೊಂದಿಗೆ ಸ್ಪರ್ಧೆ ಏರ್ಪಡಲಿದೆ. ನಿಮ್ಮ ರಹಸ್ಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಆಹಾರ ಕ್ರಮದಲ್ಲಿ ಶಿಸ್ತು ಪಾಲಿಸುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ. ಮಕ್ಕಳ ವಿಚಾರದಲ್ಲಿ ಸ್ವಲ್ಪ ಆತಂಕವಿರಬಹುದು. ಸಂಜೆಯ ವೇಳೆಗೆ ಶುಭ ಸಮಾಚಾರವೊಂದು ನಿಮ್ಮನ್ನು ತಲುಪಲಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಇಂದು ಮಿಶ್ರ ಫಲದ ದಿನವಾಗಿದೆ. ಸಂಗಾತಿಯೊಂದಿಗೆ ಸಣ್ಣಪುಟ್ಟ ವಿಚಾರಕ್ಕೆ ವಾಗ್ವಾದ ನಡೆಯಬಹುದು. ಕೋರ್ಟ್ ಕಚೇರಿ ಕೆಲಸಗಳಲ್ಲಿ ಪ್ರಗತಿ ಕಂಡುಬರುತ್ತದೆ. ವಿದೇಶಕ್ಕೆ ಹೋಗುವ ಹಂಬಲವಿರುವವರಿಗೆ ಹೊಸ ದಾರಿಗಳು ತೆರೆದುಕೊಳ್ಳಲಿವೆ. ಕಲೆಯ ಕ್ಷೇತ್ರದಲ್ಲಿರುವವರಿಗೆ ಉತ್ತಮ ವೇದಿಕೆ ಸಿಗಲಿದೆ. ಇಂದು ನಿಮ್ಮನ್ನು ಯಾರಾದರೂ ಟೀಕಿಸಬಹುದು ಆದರೆ ನೀವು ನಿಮ್ಮ ಗುರಿಯತ್ತ ಗಮನವಿಡಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಇಂದು ಆತ್ಮವಿಶ್ವಾಸ ಹೆಚ್ಚಿರಲಿದೆ. ಕಠಿಣವಾದ ಕೆಲಸಗಳನ್ನು ಕೂಡ ಸುಲಭವಾಗಿ ಪೂರ್ಣಗೊಳಿಸುವಿರಿ. ವ್ಯಾಪಾರಸ್ಥರಿಗೆ ಹಳೆಯ ಗ್ರಾಹಕರಿಂದ ಹೊಸ ಆರ್ಡರ್ ಬರಬಹುದು. ಸಾಲದ ಬಾಧೆಯಿಂದ ಮುಕ್ತಿ ಹೊಂದಲು ದಾರಿಗಳು ಕಾಣಲಿವೆ. ಆಧ್ಯಾತ್ಮಿಕ ಚಿಂತನೆಗಳು ನಿಮ್ಮಲ್ಲಿ ಮೂಡಲಿವೆ. ಮನೆಯಲ್ಲಿ ಶುಭ ಕಾರ್ಯದ ಚರ್ಚೆ ನಡೆಯಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ.
ಧನು ರಾಶಿ
ಧನು ರಾಶಿಯವರಿಗೆ ಇಂದು ಪ್ರವಾಸದ ಯೋಗವಿದೆ. ಬಹಳ ದಿನಗಳಿಂದ ಅಂದುಕೊಂಡಿದ್ದ ಯಾತ್ರಾ ಸ್ಥಳಕ್ಕೆ ಭೇಟಿ ನೀಡುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. ಹೊಸ ಗೆಳೆಯರ ಭೇಟಿಯಿಂದ ಲಾಭವಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುತ್ತಿರುವವರಿಗೆ ಶುಭ ಫಲಿತಾಂಶ ಸಿಗಲಿದೆ. ಉದ್ಯೋಗ ಬದಲಾವಣೆಗೆ ಇದು ಸಕಾಲವಲ್ಲ ಆದ್ದರಿಂದ ಯೋಚಿಸಿ ನಿರ್ಧಾರ ತಗೊಳ್ಳಿ. ಸಿಹಿ ಸುದ್ದಿಯಿಂದ ಮನೆಯಲ್ಲಿ ಸಂತೋಷ ನೆಲೆಸಲಿದೆ.
ಮಕರ ರಾಶಿ
ಮಕರ ರಾಶಿಯವರು ಇಂದು ತಾಳ್ಮೆಯಿಂದ ಇರಬೇಕು. ಯಾವುದೇ ಆತುರದ ನಿರ್ಧಾರಗಳು ನಿಮ್ಮನ್ನು ಸಂಕಷ್ಟಕ್ಕೆ ಸಿಲುಕಿಸಬಹುದು. ಕಚೇರಿಯಲ್ಲಿ ಗುಪ್ತ ಶತ್ರುಗಳ ಬಗ್ಗೆ ಎಚ್ಚರಿಕೆ ಇರಲಿ. ಸಾಲ ನೀಡುವ ಅಥವಾ ತೆಗೆದುಕೊಳ್ಳುವ ವ್ಯವಹಾರ ಇಂದು ಬೇಡ. ಯೋಗ ಮತ್ತು ಧ್ಯಾನ ಮಾಡುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ಕುಟುಂಬದ ಹಿರಿಯರ ಸಲಹೆಯನ್ನು ನಿರ್ಲಕ್ಷಿಸಬೇಡಿ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಇಂದು ಧನ ಲಾಭದ ಸುಯೋಗವಿದೆ. ಸ್ವಂತ ಉದ್ದಿಮೆದಾರರಿಗೆ ಹೆಚ್ಚಿನ ಲಾಭ ಸಿಗಲಿದೆ. ಸರ್ಕಾರಿ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿವೆ. ದಾಂಪತ್ಯದಲ್ಲಿ ಪ್ರೀತಿ ಹೆಚ್ಚಾಗಲಿದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ. ಇಂದು ನೀವು ಕೈ ಹಾಕಿದ ಪ್ರತಿಯೊಂದು ಕೆಲಸದಲ್ಲೂ ಜಯ ನಿಮ್ಮದಾಗಲಿದೆ. ಕ್ರೀಡಾಪಟುಗಳಿಗೆ ಉತ್ತಮ ಸಾಧನೆ ಮಾಡುವ ಅವಕಾಶ ಲಭ್ಯವಾಗಲಿದೆ.
ಮೀನ ರಾಶಿ
ಮೀನ ರಾಶಿಯವರಿಗೆ ಇಂದು ದಾನ ಧರ್ಮದ ಬಗ್ಗೆ ಆಸಕ್ತಿ ಮೂಡಲಿದೆ. ಪುಣ್ಯ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ. ನಿಮ್ಮ ಪ್ರತಿಭೆಗೆ ತಕ್ಕ ಮನ್ನಣೆ ದೊರೆಯಲಿದೆ. ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಲಾಭದಾಯಕ ದಿನ. ಚರ್ಮಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು ಎಚ್ಚರಿಕೆ ಇರಲಿ. ಮಕ್ಕಳ ಶಿಕ್ಷಣಕ್ಕಾಗಿ ಹಣ ವ್ಯಯ ಮಾಡಬೇಕಾಗಬಹುದು. ಒಟ್ಟಾರೆಯಾಗಿ ಇಂದು ನೆಮ್ಮದಿಯ ದಿನವಾಗಿರಲಿದೆ.








