ಮಂಗಳೂರು: ಗೋಕಳ್ಳರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಆದೇಶಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ತಾಣಗಳಲ್ಲಿ ಕೊಲೆ ಬೆದರಿಕೆ ಬಂದಿರುವ ಮಾಹಿತಿ ಲಭ್ಯವಾಗಿದೆ. ಅಕ್ರಮ ಗೋ ಸಾಗಾಟ ನಡೆಸುವವರನ್ನು ಪೋಲೀಸರಿಗೆ ಒಪ್ಪಿಸಬೇಕು, ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದಿದ್ದ ಸಭೆಯಲ್ಲಿ ಸಿಂಧೂ ಬಿ. ರೂಪೇಶ್ ಅವರು ತಿಳಿಸಿದ್ದರು. ಅಲ್ಲದೆ ಜಾನುವಾರು ಸಾಗಾಟ ಮಾಡುವ ವಾಹನದ ಹಾಗೂ ಜನರ ಮೇಲೆ ಹಲ್ಲೆ ನಡೆಸಿದರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಇದೀಗ ಜಿಲ್ಲಾಧಿಕಾರಿಗಳನ್ನು ಕೊಲೆ ಮಾಡಬೇಕು ಎಂದು ತುಳುವಿನಲ್ಲಿ ಹಾಕಿದ್ದ ಪೋಸ್ಟ್ ಒಂದು ಹರಿದಾಡ್ತಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿದೆ. ಮಂಗಳೂರು ಉಪ ಆಯುಕ್ತರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈಗಾಗಲೇ ತನಿಖೆ ಆರಂಭಿಸಿದ್ದು, ಈ ಬಗ್ಗೆ ಡಿಸಿ ಜೊತೆ ಚರ್ಚಿಸುತ್ತೇವೆ. ಒಂದು ವೇಳೆ ಅವರು ದೂರು ನೀಡಿದರೆ ಪ್ರಕರಣ ದಾಖಲಿಸಿಕೊಳ್ಳುತ್ತೇವೆ. ಇಲ್ಲದೇ ಹೋದಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತೆ ಎಂದು ತಿಳಿಸಿದ್ದಾರೆ.
ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ
ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...








