Dakshina Kannada – ಪತ್ನಿಯನ್ನ ಕೊಂದು ಪತಿ ಆತ್ಮಹತ್ಯೆ
ಮಂಗಳೂರು : ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯನ್ನ ಪತಿಯೇ ಕೊಲೆ ಮಾಡಿ ತಾನೂ ನೇಣಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಸೋಮೇಶ್ವರ ಪಿಲಾರ್ ನಲ್ಲಿ ನಡೆದಿದೆ.
46 ವರ್ಷದ ಶೋಭಾ ಕೊಲೆಯಾದ ಮಹಿಳೆಯಾಗಿದ್ದಾರೆ.
55 ವರ್ಷದ ಶಿವಾನಂದ ಕೊಲೆ ಆರೋಪಿಯಾಗಿದ್ದಾರೆ.
ಅನೈತಿಕ ಸಂಬಂಧ ಇದೆ ಎಂದು ಅನುಮಾನ ಹೊಂದಿದ್ದ ಪತಿ ಶಿವಾನಂದ, ಪತ್ನಿಯ ಜೊತೆ ಬೆಳ್ಳಂಬೆಳಗ್ಗೆ ಜಗಳ ಶುರು ಮಾಡಿದ್ದು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.
ಬಳಿಕ ಪತ್ನಿಯ ಸಂಬಂಧಿಕರಿಗೆ ಕರೆ ಮಾಡಿ, ನಾನು ಸಾಯುತ್ತೇನೆ, ನನ್ನ ಶವಕ್ಕೆ ಮುಡಿಸಲು ಹೂವು ತನ್ನ ಎಂದು ಹೇಳಿ ಕಾಲ್ ಕಟ್ ಮಾಡಿದ್ದಾರೆ.
ಬಳಿಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. .
ಬಳಿಕ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.