ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 8 ಜಿಲ್ಲೆಗಳಲ್ಲಿ ಕಠಿಣ ನಿಯಮ – ಕೊರೋನಾ ತಡೆಗಟ್ಟಲು ಸರ್ಕಾರದಿಂದ ಹೊಸ ಮಾರ್ಗಸೂಚಿ

1 min read
Newcovidprotocol

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 8 ಜಿಲ್ಲೆಗಳಲ್ಲಿ ಕಠಿಣ ನಿಯಮ – ಕೊರೋನಾ ತಡೆಗಟ್ಟಲು ಸರ್ಕಾರದಿಂದ ಹೊಸ ಮಾರ್ಗಸೂಚಿ

ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ದಕ್ಷಿಣ ಕನ್ನಡ ಉಡುಪಿ ಸೇರಿದಂತೆ 8 ಜಿಲ್ಲೆಗಳ ಸಿನಿಮಾ ಥಿಯೇಟರ್ ಗಳಲ್ಲಿ ಶೇಕಡ 50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ.
Covid test

ದಕ್ಷಿಣ ಕನ್ನಡ, ಉಡುಪಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕಲಬುರ್ಗಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳಲ್ಲಿ 6 ರಿಂದ 9ನೇ ತರಗತಿಯ ವಿದ್ಯಾಗಮ ಶಾಲೆಗಳನ್ನು, ಬಾರ್, ರೆಸ್ಟೋರೆಂಟ್, ಪಬ್, ಕ್ಲಬ್ ಗಳನ್ನು ಬಂದ್ ಮಾಡಲಾಗುವುದು ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.
ರಾಜ್ಯಾದ್ಯಂತ ಸ್ವಿಮ್ಮಿಂಗ್ ಪೂಲ್, ಜಿಮ್ ಗೆ ನಿರ್ಬಂಧ ಹೇರಲಾಗಿದೆ. ಇದು ಎಪ್ರಿಲ್ 20ರ ವರೆಗೆ ಜಾರಿಯಲ್ಲಿರಲಿದೆ.

ಕೊರೋನಾ ಹೊಸ ಮಾರ್ಗಸೂಚಿ

6 ರಿಂದ 9ನೇ ತರಗತಿಯ ವಿದ್ಯಾಗಮ ಸ್ಥಗಿತ. 10, 11 ಮತ್ತು 12ನೇ ತರಗತಿ ಮುಂದುವರಿಕೆ. ತರಗತಿಯಲ್ಲಿ ಹಾಜರಾತಿ ಕಡ್ಡಾಯವಲ್ಲ.

ಸ್ವಿಮ್ಮಿಂಗ್ ಪೂಲ್, ಜಿಮ್ ಗೆ ನಿರ್ಬಂಧ.
ಯಾವುದೇ ಕಾರಣಕ್ಕೂ ಗುಂಪು ಸೇರುವಂತಿಲ್ಲ. ಯಾವುದೇ ಕಾರ್ಯಕ್ರಮ ಆಯೋಜನೆ ಮಾಡುವಂತಿಲ್ಲ. ಪ್ರತಿಭಟನೆ, ಜಾಥಾಗಳಿಗೆ ಅವಕಾಶವಿಲ್ಲ

ದೇವಾಲಯ, ಪ್ರಾರ್ಥನಾ ಮಂದಿರದಲ್ಲಿ ವೈಯುಕ್ತಿಕ ಪ್ರಾರ್ಥನೆಗಳಿಗೆ ಅವಕಾಶ ನೀಡಲಾಗಿದೆ. ಆದರೆ ಜನರು ಗುಂಪು ಸೇರುವ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ

ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕಲಬುರಗಿ, ಬೀದರ್ ಧಾರವಾಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ವ್ಯಾಪ್ತಿಯಲ್ಲಿ ಸಿನಿಮಾ ಥಿಯೇಟರ್ ಗಳಲ್ಲಿ ಶೇಕಡ 50ರಷ್ಟು ಪ್ರೇಕ್ಷಕರಿಗೆ ಅವಕಾಶ.

8 ಜಿಲ್ಲೆಯ ಪಬ್, ಬಾರ್, ಕ್ಲಬ್, ರೆಸ್ಟೋರೆಂಟ್‌ನಲ್ಲಿ ಶೇ 50ರಷ್ಟು ಜನರು ಸೇರಲು ಮಾತ್ರ ಅವಕಾಶ
Corona negative report
ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ.

ಸಾರ್ವಜನಿಕ ಸಾರಿಗೆಗಳಲ್ಲಿ ಸೀಟಿಂಗ್ ಸಾಮರ್ಥ್ಯ ಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಕೂರಿಸುವಂತಿಲ್ಲ

ಜಾತ್ರೆ/ ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗೆ ಜನ ಗುಂಪು ಸೇರುವಂತಿಲ್ಲ.

#dakshinaKannada #udupi #Newcovidprotocol

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd