ಮಂಡ್ಯ: ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಜೆಡಿಎಸ್ ಗೆ ಠಕ್ಕರ್ ಕೊಟ್ಟ ಕಾಂಗ್ರೆಸ್ ಗೆ ತಿರುಗೇಟು ನೀಡಲು ದಳ ಮುಂದಾಗಿದೆ.
ಮಂಡ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅಭಿನಂದನಾ ಸಮಾರಂಭ ನಡೆಸಲು ಚಿಂತನೆ ನಡೆಸಿದೆ. ಈ ಮೂಲಕ ಕಾಂಗ್ರೆಸ್ ಜನಕಲ್ಯಾಣ ಸಮಾವೇಶಕ್ಕೆ ತಿರುಗೇಟು ನೀಡಲು ಸಿದ್ಧತೆ ನಡೆಸಿದೆ.
ಕಾಂಗ್ರೆಸ್ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಬಣವು ಮಾಜಿ ಪ್ರಧಾನಿ ದೇವೇಗೌಡರ ಪ್ರಾಭಲ್ಯವಿರುವ ಹಾಸನದಲ್ಲಿ ಜನಕಲ್ಯಾಣ ಹೆಸರಿನಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದೆ. ಕಾಂಗ್ರೆಸ್ಸಿಗರ ಪವರ್ ಶೋಗೆ ಪ್ರತ್ಯುತ್ತರ ನೀಡಲು ಜೆಡಿಎಸ್ ಪ್ಲಾನ್ ಮಾಡಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಹೆಚ್ಡಿಕೆ ಅಭಿನಂದನಾ ಕಾರ್ಯಕ್ರಮ ನಡೆಸಲು ಮುಂದಾಗಿದೆ.
ಡಿ.15 ರಂದು ಮಂಡ್ಯದ ಸರ್ ಎಂ.ವಿ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಅಲ್ಲದೇ, ಈ ವೇಳೆ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಕಾರ್ಯಕ್ರಮಕ್ಕೆ ಲಕ್ಷಾಂತರ ಜನರನ್ನು ಆಹ್ವಾನಿಸಲು ಜೆಡಿಎಸ್ ಮುಂದಾಗಿದೆ.