ಡಾಲಿ ನಟನೆಯ “ಹೆಡ್ ಬುಷ್” ಚಿತ್ರ ಬಿಡುಗಡೆಗೆ ಮುಹೂರ್ತ ಫಿಕ್ಸ್….
ಭೂಗತ ದೊರೆ ಎಂ.ಪಿ.ಜಯರಾಜ್ ಜೀವನಾಧಾರಿತ “ಹೆಡ್ ಬುಷ್” ಚಿತ್ರದ ಚಿತ್ರೀಕರಣ ಕಂಪ್ಲೀಟ್ ಆಗಿದ್ದು ತೆರೆಗೆ ಬರಲು ಸಜ್ಜಾಗುತ್ತಿದೆ. ಆದ್ರೆ ಇತ್ತೀಚೆಗೆ ಸಿನಿಮಾ ವಿವಾದಕ್ಕೆ ಸಿಲುಕಿ ಕೊಂಡಿದ್ದು ಕೊಂಚ ಅಡಚಣೆ ಉಂಟುಮಾಡಿತ್ತು. ಆದ್ದರೀಗ ಸಿನಿಮಾತಂಡ ಸಿನಿಮಾದ ರಿಲೀಸ್ ಡೇಟ್ ಅನ್ನ ಅನೌನ್ಸ್ ಮಾಡಿದೆ.
ಡಾಲಿ ಧನಂಜಯ ಜಯರಾಜ್ ಅವರ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರವನ್ನು ಶೂನ್ಯ ನಿರ್ದೇಶಿಸುತ್ತಿದ್ದಾರೆ. 1970 ರ ಬೆಂಗಳೂರಿನ ಭೂಗತ ಜಗತ್ತನ್ನು ಶೂನ್ಯ ಈ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ. ಆ ಕಾಲಕ್ಕೆ ಸರಿಹೊಂದುವ ಅನೇಕ ಸೆಟ್ ಗಳನ್ನು ಹಾಕಲಾಗಿದೆ.
ನಟ ಧನಂಜಯ್ ‘ಹೆಡ್ ಬುಷ್’ ಸಿನಿಮಾ ಆರಂಭ ಆದಾಗಿನಿಂದಲೂ, ಈ ಚಿತ್ರ ಬೆಂಗಳೂರಿನ ಮೊದಲ ಅಂಡರ್‌ವರ್ಲ್ಡ್ ಡಾನ್ ಜಯರಾಜ್ ಜೀವನ ಆಧಾರಿತ ಸಿನಿಮಾ ಎಂದು ಹೇಳಲಾಗಿದೆ. ಆದ್ರೆ ಇತ್ತೀಚೆಗೆ ಜಯರಾಜ್ ಪುತ್ರ ಅಜಿತ್ ಜಯರಾಜ್ ಈ ಸಿನಿಮಾಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ..
ಇತ್ತೀಚೆಗೆ ಅಜಿತ್ ಜಯರಾಜ್ ಹೆಡ್ ಬುಷ್ ಚಿತ್ರತಂಡದ ವಿರುದ್ಧ ಫಿಲ್ಮ್ ಚೇಂಬರ್ ಮೆಟ್ಟಿಲೇರಿದ್ದರು. ಹೆಡ್ ಬುಷ್ ಸಿನಿಮಾ ನಿಲ್ಲಿಸುವಂತೆ ಆಗ್ರಹಿಸಿದ್ದರು. ಆದ್ರೀಗ ಸಿನಿಮಾದ ವಿವಾದ ತಣ್ಣಗಾಗಿದ್ದು , ಇದರ ಬೆನ್ನಲ್ಲೇ ಚಿತ್ರತಂಡ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದು ಡಾಲಿ ಫ್ಯಾನ್ಸ್ ಖುಷ್ ಆಗಿದ್ಧಾರೆ..
ಅಂದ್ಹಾಗೆ ಸಿನಿಮಾ ಅಕ್ಟೋಬರ್ 21ಕ್ಕೆ ಸಿನಿಮಾ ರಿಲೀಸ್ ಆಗಲಿದೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಚಿತ್ರದ ರಿಲೀಸ್ ದಿನಾಂಕವನ್ನು ಪ್ರಕಟ ಮಾಡಲಾಗಿದೆ. ಹೊಸ ಪೋಸ್ಟರ್ ನಲ್ಲಿ ಧನಂಜಯ್ ಹೊಸ ಲುಕ್ ಕೂಡ ರಿವೀಲ್ ಆಗಿದ್ದು ಡಾಲಿ ಸಖತ್ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ.
ಫಿಲಂ ಮೇಕಿಂಗ್ ನಲ್ಲಿ ಎಂ ಎಸ್ ಸಿ ಪದವಿ ಪಡೆದಿರುವ ಶೂನ್ಯ, ರಕ್ಷಿತ್ ಶೆಟ್ಟಿ ಅವರ ಬಳಿ ಅಸೋಸಿಯೇಟ್ ಆಗಿ ಕಾರ್ಯ ನಿರ್ವಹಿಸಿ ಅನುಭವ ಪಡೆದಿದ್ದಾರೆ. ಅಷ್ಟೇ ಅಲ್ಲದೇ, ಶೂನ್ಯ ಫಿಲಂ ಮೇಕಿಂಗ್ ಕುರಿತು ಸಂಶೋಧನೆ ಕೂಡ ನಡೆಸಿದ್ದಾರೆ.
ಡಾಲಿ ಪಿಕ್ಚರ್ಸ್ ಹಾಗೂ ಸೋಮಣ್ಣ ಟಾಕೀಸ್ ಲಾಂಛನದಲ್ಲಿ ಡಾಲಿ ಧನಂಜಯ ಹಾಗೂ ರಾಮ್ಕೊ ಸೋಮಣ್ಣ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅದ್ಭುತ ಹಾಡುಗಳಿಗೆ ಚರಣ್ ರಾಜ್ ಸಂಗೀತ ನಿರ್ದೇಶನವಿದೆ. ಸುನೊಜ್ ವೇಲಾಯಧನ್ ಅವರ ಛಾಯಾಗ್ರಹಣವಿರುವ ಈ ಚಿತ್ರದ ಕಲಾ ನಿರ್ದೇಶಕರು ಬಾಡಲ್ ನಂಜುಂಡಸ್ವಾಮಿ.