ದಲಿತ ಸಿಎಂ ಕೂಗು : ಸಿದ್ದರಾಮಯ್ಯ ಫುಲ್ ಅಲರ್ಟ್
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದ್ರೆ ಮುಖ್ಯಮಂತ್ರಿಯಾರಾಗ್ತಾರೆ ಅನ್ನೋ ಪ್ರಶ್ನೆ ಶುರುವಾಗುತ್ತಿದ್ದಂತೆ, ದಲಿತ ಸಿಎಂ ಕೂಗು ಮತ್ತೆ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ರೇಸ್ ನಲ್ಲಿ ಮೊದಲ ಸ್ಥಾನದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಅಹಿಂದ ಆಟ ಶುರು ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ದಲಿತ ಸಿಎಂ ಕೂಗು ರಾಜ್ಯದಲ್ಲಿ ಸುಮಾರು ದಿನಗಳಿಂದ ಕೇಳಿಬರುತ್ತಿದ್ದು, ಇದೀಗ ಅದಕ್ಕೆ ಸೂಕ್ತ ಸಮಯ ಬಂದಂತಿದೆ. ಇದೇ ಕಾರಣಕ್ಕೆ ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟಿರುವ ಹಲವರು ದಲಿತ ಸಮಾವೇಶ ನಡೆಸಲು ಸಿದ್ಧತೆ ಆರಂಭಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಇದರಿಂದ ಅಹಿಂದ ನಾಯಕ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರಿಗೆ ಹಿನ್ನಡೆ ಆಗುವ ಸಾಧ್ಯತೆಗಳಿವೆ. ಈ ಕಾರಣಕ್ಕಾಗಿ ದಲಿತ ಸಮಾವೇಶಕ್ಕೂ ಮುನ್ನ ಅಹಿಂದ ಸಮಾವೇಶ ನಡೆಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ.
ಈ ವಿಚಾರವಾಗಿ ಚರ್ಚಿಸಲು ತಮ್ಮ ಪರಮಾಪ್ತ ಡಾ. ಹೆಚ್.ಸಿ. ಮಹದೇವಪ್ಪ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.