ಬಿಹಾರ: ಬಿಹಾರದಲ್ಲಿ ದಲಿತರ ಮನೆಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಬಿಹಾರದ ನವಾಡದಲ್ಲಿ (Nawada) ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ (Bihar) ಎನ್‌ಡಿಎ (NDA) ಸರ್ಕಾರವನ್ನು ಕಾಂಗ್ರೆಸ್ (Congress) ತರಾಟೆಗೆ ತೆಗೆದುಕೊಂಡಿದೆ.
ರಾಜ್ಯದಲ್ಲಿ ‘ಜಂಗಲ್ ರಾಜ್’ ಅಸ್ತಿತ್ವದಲ್ಲಿರುವುದಕ್ಕೆ ಸಾಕ್ಷಿಯಾಗಿದೆ. ದಲಿತರು ಮತ್ತು ವಂಚಿತರ ಕುರಿತು ಸರ್ಕಾರ ಅಸಡ್ಡೆ ತೋರುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಬುಧವಾರ 80ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ನರೇಂದ್ರ ಮೋದಿ (Narendra Modi) ಮತ್ತು ನಿತೀಶ್ ಕುಮಾರ್ ಆಡಳಿತದಲ್ಲಿ ಬಿಹಾರದಾದ್ಯಂತ ಬೆಂಕಿ ಕಾಣಿಸಿಕೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್‌ಗೆ ತೊಂದರೆಯಾಗುವುದಿಲ್ಲ, ಬಡವರು ಸುಟ್ಟುಹೋಗಿದ್ದಾರೆ ಎಂದು ಆರ್ ಜೆಡಿ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಕಿಡಿಕಾರಿದ್ದಾರೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 15ಕ್ಕೂ ಅಧಿಕ ಜನರನ್ನು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ನಾವಡಾ ಎಸ್ಪಿ ಅಭಿನವ್ ಧಿಮಾನ್, ತೋಲಾದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಕರೆ ಬಂದಿದ್ದು, ತಕ್ಷಣ ಪೊಲೀಸರು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಪ್ರಾಥಮಿಕ ತನಿಖೆ ಪ್ರಕಾರ, ಈ ಘಟನೆಗೆ ಜಮೀನು ವಿವಾದ ಕಾರಣ ಎಂದು ತಿಳಿದು ಬಂದಿದೆ ಎಂದು ಹೇಳಿದ್ದಾರೆ.