ದಲಿತ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಅತ್ಯಾಚಾರ, ಬಲವಂತದ ಮತಾಂತರ
ಉತ್ತರಪ್ರದೇಶ : ದಲಿತ ಯುವತಿಯೊಬ್ಬಳನ್ನ ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಮಾಡಿಕೊಂಡಿದ್ದ ಮುಸ್ಲಿಂ ಯುವಕನೋರ್ವ ಆಕೆಯ ಮೇಲೆ ಅತ್ಯಾಚಾರವೆಸಗಿ ಆಕೆಯನ್ನ ಬಲವಂತವಾಗಿ ಮತಾಂತರ ಮಾಡಿರುವುದಾಗಿ ಆರೋಪ ಕೇಳಿಬಂದಿದೆ.. ಸಂತಸ್ತ ಯುವತಿ ಈ ಸಂಬಂಧ ದೂರು ದಾಖಲಿಸಿದ್ದು, ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮದುವೆ ಆಗುವುದಾಗಿ ನಂಬಿಸಿ ಸಂತ್ರಸ್ತೆ ಮತ್ತು ಆಕೆಯ ಕುಟುಂಬಸ್ಥರನ್ನು ಬಲವಂತದಿಂದ ಮತಾಂತರ ಮಾಡಿಸಿರುವುದು ತಿಳಿದುಬಂದಿದೆ. ಹಾಗಾಗಿ ಆರೋಪಿ ಮತ್ತು ಆತನ ಕುಟುಂಬ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ನನ್ನನ್ನು ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದ. ಜತೆಗೆ, ತವರು ಮನೆಯಿಂದ 7 ಲಕ್ಷ ರೂ. ಹಣ ತರುವಂತೆ ಆತ ಮತ್ತು ಆತನ ಕುಟುಂಬಸ್ಥರು ಹಿಂಸಿಸುತ್ತಿದ್ದರು. ನನ್ನ ಮೇಲೆ ಹಲ್ಲೆ ನಡೆಸಿ ಏ.10 ರಂದು ಮನೆಯಿಂದ ಹೊರಹಾಕಿದ್ದಾರೆ ಎಂದು ಯುವತಿ ಪೊಲೀಸರಿಗೆ ವಿವರಿಸಿದ್ದಾಳೆ. 2020ರ ಸೆಪ್ಟೆಂಬರ್‌ನಲ್ಲಿ ಆಕೆ ಮತ್ತು ಆಕೆಯ ಕುಟುಂಬಸ್ಥರನ್ನು ಬಲವಂತವಾಗಿ ಮತಾಂತರ ಮಾಡಿಸಲಾಗಿದೆ ಎನ್ನಲಾಗಿದೆ.
ಪಿಲಿಭಿತ್ ಜಿಲ್ಲೆಯ ಯುವಕ ಸುಮಾರು 5 ವರ್ಷಗಳ ಹಿಂದೆ ತನ್ನ ಸಹೋದರಿಯ ಫೇಸ್ ಬುಕ್ ಖಾತೆಯ ಮೂಲಕ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ಸಿಂಗ್ ಸಜ್ವಾನ್ ತಿಳಿಸಿದ್ದಾರೆ. ಬಳಿಕ ಆರೋಪಿಯು ಯುವತಿಯನ್ನು ರಾಯ್ ಬರೇಲಿಯ ಮಾಲ್‌ಗೆ ಕರೆದೊಯ್ದಿದ್ದ. ನಂತರ ಆತನ ಮನೆಗೆ ಕರೆದುಕೊಂಡು ಹೋಗಿ ಕುಟುಂಬಸ್ಥರನ್ನು ಪರಿಚಯಿಸಿದ್ದ. ಬಳಿಕ ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ವೆಸಗಿದ್ದಾನೆ. ಮುಸ್ಲಿಂ ಸಮುದಾಯಕ್ಕೆ ಮತಾಂತರವಾಗಲು ನಿರಾಕರಿಸಿದಾಗ ಜೊತೆಗಿದ್ದ ವಿಡಿಯೊಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.








