ಯೋಗಿನಾಡಲ್ಲಿ ಸಂವಿಧಾನ ಶಿಲ್ಪಿ Ambedkar ಪ್ರತಿಮೆಗೆ ಹಾನಿ : ಸ್ಥಳೀಯರಿಂದ ಪ್ರೊಟೆಸ್ಟ್
ಲಖನೌ : ಉತ್ತರಪ್ರದೇಶದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಅಪರಿಚಿತ ದುಷ್ಕರ್ಮಿಗಳು ಹಾನಿ ಉಂಟುಮಾಡಿದ್ದಾರೆ.
ಹೀಗಾಗಿ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.
ಯುಪಿಯ ಬಲ್ಲಿಯಾ ಜಿಲ್ಲೆಯ ರಾಂಪುರ್ ಅಸ್ಲಿ ಗ್ರಾಮದಲ್ಲಿ ಸೋಮವಾರ ರಾತ್ರಿ ಅಂಬೇಡ್ಕರ್ ಪ್ರತಿಮೆಗೆ ಹಾನಿ ಮಾಡಲಾಗಿದೆ.
ಇದರಿಂದ ರೊಚ್ಚಿಗೆದ್ದಿರುವ ಗ್ರಾಮಸ್ಥರು ಗಡ್ವಾರ್ – ನಾಗ್ರಾ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.
ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೆÇಲೀಸರು, ಸ್ಥಳೀಯರನ್ನು ಮನವೊಲಿಸಿ, ಪ್ರತಿಭಟನೆಯನ್ನು ನಿಲ್ಲಿಸಿದ್ದಾರೆ.
ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.









