ಚಂದನವನದ ನಟ ಡಾರ್ಲಿಂಗ್ ಕೃಷ್ಣ (Darling Krishna) ಈಗ ನಿರ್ದೇಶಕ ಶಶಾಂಕ್ ಅವರೊಂದಿಗೆ ಕೈ ಜೋಡಿಸಿದ್ದಾರೆ.
ಹಲಗಲಿ ಸಿನಿಮಾದಿಂದ ಹೊರಬಂದ ನಂತರ ಡಾರ್ಲಿಂಗ್ ಕೃಷ್ಣ ಈ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇತ್ತೀಚೆಗೆ ತೆರೆಗೆ ಅಪ್ಪಳಿಸಿದ್ದ ‘ಕೌಸಲ್ಯಾ ಸುಪ್ರಜಾ ರಾಮ’ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣಗೆ ಶಶಾಂಕ್ ನಿರ್ದೇಶನ ಮಾಡಿದ್ದರು. ಈ ಚಿತ್ರದಲ್ಲಿ ಬೃಂದಾ ಆಚಾರ್ಯ ಮತ್ತು ಮಿಲನಾ ನಾಗರಾಜ್ ನಾಯಕಿಯಾಗಿ ನಟಿಸಿದ್ದರು. ಈ ಚಿತ್ರ ಸಿನಿ ರಸಿಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಸದ್ಯ ಈಗ ಮತ್ತೊಂದು ಥ್ರಿಲ್ಲಿಂಗ್ ಚಿತ್ರವನ್ನು ಡಾರ್ಲಿಂಗ್ ಕೃಷ್ಣ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಪ್ರಕಾಶ್ ರಾಜ್ ಮತ್ತು ತೆಲುಗು ನಟ ಸುನೀಲ್ ಈ ಚಿತ್ರದಲ್ಲಿ ಇದ್ದಾರೆ ಎನ್ನಲಾಗಿದೆ. ಸದ್ಯದಲ್ಲಿಯೇ ಈ ಚಿತ್ರದ ಶೂಟಿಂಗ್ ಆರಂಭವಾಗಲಿದೆ ಎಂದು ಚಿತ್ರತಂಡ ಬಾಯಿ ಬಿಟ್ಟಿದೆ.