ಯಾವುದೇ ಹಣ ಪಡೆಯದೆ ಕೃಷಿ ಇಲಾಖೆಯ ರಾಯಭಾರಿಯಾದ ದರ್ಶನ್
ಬೆಂಗಳೂರು : ರಾಜ್ಯ ಸರ್ಕಾರದ ಕೃಷಿ ಇಲಾಖೆಯ ರಾಯಭಾರಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನೇಮಕವಾಗಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕ ರಾಜ್ಯ ಕೃಷಿ ಇಲಾಖೆಯ ನೂತನ ರಾಯಭಾರಿಯಾಗಿ, ರಾಜ್ಯದ ಅನ್ನದಾತರ ಏಳಿಗೆಗೆ ಕೈಜೋಡಿಸುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು.
ಚಿತ್ರರಂಗದ ವೃತ್ತಿ ಬದುಕಿನ ಜೊತೆಗೆ ಹಲವು ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿರುವ ದರ್ಶನ ಅವರು ನಾಡಿನ ಯುವಜನತೆಗೆ ಸ್ಫೂರ್ತಿಯಾಗಿದ್ದಾರೆ.
ಅಲ್ಲದೇ, ಅವರ ಪರಿಸರ ಪ್ರಜ್ಞೆ, ಪ್ರಾಣಿ ಸಂರಕ್ಷಣೆ ಹಾಗೂ ಕೃಷಿ ಚಟುವಟಿಕೆಗಳೆಡಗಿನ ಒಲವು ಇಂದಿನ ಯುವ ಕೃಷಿಕರಿಗೆ ಮಾದರಿಯಾಗಿದೆ.
ರಾಜ್ಯದ ಕೃಷಿ ಇಲಾಖೆಯಲ್ಲಿ ಹಲವಾರು ಮಹತ್ತರ ಬದಲಾವಣೆ ಹಾಗೂ ನಾಡಿನ ಯುವ ಜನತೆಗೆ “ವೀಕೆಂಡ್ ಅಗ್ರಿಕಲ್ಚರ್ ಸಂಸ್ಕøತಿ” ಪರಿಚಯಿಸುವ ನಮ್ಮ ಪ್ರಯತ್ನಕ್ಕೆ ಮುಕ್ತ ಮನಸ್ಸಿನಿಂದ ಕೈ ಜೋಡಿಸಿರುವ ದರ್ಶನ ಅವರಿಗೆ ನಾನು ಆಭಾರಿಯಾಗಿದ್ದೇನೆ.
ನಾವೆಲ್ಲರೂ ಸೇರಿ ರಾಜ್ಯದ ಅನ್ನದಾತರ ಋಣ ತೀರಿಸುವ ಕಾರ್ಯ ಮಾಡೋಣ ಎಂದು ಬರೆದುಕೊಂಡಿದ್ದಾರೆ.









