ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ (Darshan) ಮತ್ತು ಗ್ಯಾಂಗ್ ಗೆ ಸೆಪ್ಟೆಂಬರ್ 9ರ ವರೆಗೆ ನ್ಯಾಯಾಂಗ ಬಂಧನ (Judicial Custody) ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ.
ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆಹಾಜರುಪಡಿಸಲಾಗಿತ್ತು ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದರು. ಮನವಿ ಪುರಸ್ಕರಿಸಿದ ನ್ಯಾಯಾಧೀಶರು ದರ್ಶನ್ ಮತ್ತು ಗ್ಯಾಂಗ್ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಮತ್ತೆ ಆದೇಶ ಹೊರಡಿಸಿದ್ದಾರೆ.
ನ್ಯಾಯಾಂಗ ಬಂಧನ ವಿಸ್ತರಣೆಗೊಂಡ ಬೆನ್ನಲ್ಲೇ ದರ್ಶನ್ ರನ್ನು ಇಂದು ಸಂಜೆ ಅಥವಾ ರಾತ್ರಿ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ. ಶಿರಾತುಮಕೂರು ಮಾರ್ಗವಾಗಿ ಬಳ್ಳಾರಿ ಜೈಲಿಗೆ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಅಲ್ಲದೇ, ಪರಪ್ಪನ ಅಗ್ರಹಾರದಲ್ಲಿ ಸಿಗರೇಟ್ ಸೇದುತ್ತ, ಕಾಫಿ ಕುಡಿಯುತ್ತ, ರೌಡಿಗಳೊಂದಿಗೆ ಆರಾಮಾಗಿ ಹರಟೆ ಹೊಡೆಯುತ್ತಿದ್ದ ಪ್ರಕರಣದ ಕುರಿತು ಪೊಲೀಸರು ಈಗಾಗಲೇ ತನಿಖೆ ಕೈಗೊಂಡಿದ್ದಾರೆ.