ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಜಾಮೀನು ಅರ್ಜಿಯ ವಿಚಾರಣೆ ಮುಕ್ತಾಯವಾಗಿದ್ದು, ಅ. 14ರಂದು ತೀರ್ಪು ಪ್ರಕಟವಾಗಲಿದೆ. ಅಲ್ಲದೇ, ಅಂದು ಪವಿತ್ರಾ ಗೌಡ (Pavithra Gowda) ಸೇರಿದಂತೆ ಇನ್ನಿತರ ಕೆಲವು ಆರೋಪಿಗಳು ಜಾಮೀನು ಅರ್ಜಿಯ ವಿಚಾರಣೆಯ ತೀರ್ಪು ಕೂಡ ಪ್ರಕಟವಾಗಲಿದೆ.
ಸುದೀರ್ಘ ವಿಚಾರಣೆಯ ನಂತರ ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ಜೈಶಂಕರ್ ಅವರು ವಿಚಾರಣೆ ಮುಕ್ತಾಯಗೊಳಿಸಿದರು. ಅಲ್ಲದೇ, ಅ. 14ರಂದು ಜಾಮೀನು ಆದೇಶ ಪ್ರಕಟಿಸುವುದಾಗಿ ಹೇಳಿದರು.
ದರ್ಶನ್ ಪರ ಹಿರಿಯ ಕ್ರಿಮಿನಲ್ ವಕೀಲ ಸಿವಿ ನಾಗೇಶ್ ಅವರು ಇಂದು ಪ್ರತಿವಾದ ಮಂಡಿಸಿದರು. ಪೊಲೀಸ್ ಪರ ಎಸ್ಪಿಪಿ ಪ್ರಸನ್ನ ಕುಮಾರ್ ವಾದಿಸಿದರು. ಪವಿತ್ರಾ ಗೌಡ ಸೇರಿದಂತೆ ಕೆಲವು ಆರೋಪಿಗಳು ಜಾಮೀನು ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಕೋರ್ಟ್ ಅ.14 ರಂದು ಆದೇಶ ಪ್ರಕಟಿಸುವುದಾಗಿ ಹೇಳಿತ್ತು. ಈಗ ಅಂದೇ ದರ್ಶನ್ ಜಾಮೀನು ಫಲಿತಾಂಶ ಪ್ರಕಟಿಸುವುದಾಗಿ ಹೇಳಿದೆ.