ಹಿಂದಿ ಹೇರಿಕೆಯ ವಿರುದ್ಧ ಎದೆ ತಟ್ಟಿ ನಿಂತ “ ಸ್ಟಾರ್ಸ್” : ದರ್ಶನ್ , ದುನಿಯಾ ವಿಜಿ ಹೇಳಿದ್ದೇನು..?

ಹಿಂದಿ ಹೇರಿಕೆಗೆ ಕೇವಲ ಕನ್ನಡಪರ ಹೋರಾಟಗಾರರು ರಾಜಕಾರಣಿಗಳು ಅಷ್ಟೇ , ಸ್ಯಾಂಡಲ್ ವುಡ್ ಸ್ಟಾರ್ ನಟರು ಸಹ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೌದು ಅನೇಕ ಖ್ಯಾತ ನಟರು ಹಿಂದಿ ಹೇರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ದುನಿಯ ವಿಜಯ್, ರಿಷಬ್ ಶೆಟ್ಟಿ, ಪ್ರಕಾಶ್ ರಾಜ್, ಡಾಲಿ ಧನಂಜಯ್, ಆದಿನಗಳು ಚೇತನ್ ಹೀಗೆ ಅನೇಕರು ಹಿಂದಿ ಹೇರಿಕೆಯ ಸರ್ಕಾರದ ನೀತಿಯನ್ನು ತಮ್ಮದೇ ಶೈಲಿಯಲ್ಲಿ ಖಂಡಿಸಿದ್ದಾರೆ.

 

 

 

 

 

 

ಚಾಲೆಂಜಿಂಗ್ ಸ್ಟಾರ್ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಹಿಂದಿ ಹೇರಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ. ನಮ್ಮ ಕೊನೆಯುಸಿರಿರುವವರೆಗೂ ಕನ್ನಡ ಪರವಾಗಿ ನಿಲ್ಲುತೇವೆ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ” ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಬಾಷೆ. ಕನ್ನಡಿಗರ ತೆರಿಗೆ ದುಡ್ಡಲ್ಲಿ ಹಿಂದಿ ದಿವಸ್ ಆಚರಣೆ ಯೋಗ್ಯವಲ್ಲ. ಅದು ಕೇವಲ ಉತ್ತರ ಭಾರತದ ಕೆಲವು ರಾಜ್ಯಗಳಿಗೆ ಸೀಮಿತವಾಗಿದ್ರೆ ಒಳಿತು ಎಂದಿದ್ದಾರೆ. ಅಲ್ಲದೇ ನಮ್ಮ ಕೊನೆಯ ಉಸಿರು ಇರುವವರೆಗೂ ಕನ್ನಡದ ಪರವಾಗಿ ನಿಲ್ಲುತ್ತೇವೆ ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎಂದು ಬರೆದುಕೊಂಡು ಕನ್ನಡಾಭಿಮಾನ ಮೆರೆದಿದ್ದಾರೆ ದಚ್ಚು.

ದುನಿಯಾ ವಿಜಯ್

ಇನ್ನೂ ದುನಿಯಾ ವಿಜಿ ಅವರು ಸಹ ಫೇಸ್ ಬುಕ್ ಪೋಸ್ಟ್ ಮೂಲಕ ಹಿಂದಿ ಹೇರಿಕೆಯನ್ನು ತೀವ್ರವಾಗಿ ವಿರೋಧ ಮಾಡಿದ್ದಾರೆ. “ ಹಿಂದಿ ದಿವಸ್ ಆಚರಿಸಲು ನಾವು ಹಿಂದಿ ಬಾಷಿಕರಲ್ಲ. ನಮ್ಮ ರಾಜ್ಯದಲ್ಲಿ ಆಡಳಿತ ಬಾಷೆ ಹಿಂದಿಯೂ ಅಲ್ಲ. ನನಗೆ ಹುಟ್ಟಿದಾಗಿನಿಂದಲೂ ಗೊತ್ತಿರುವುದು ಕನ್ನಡ ಒಂದೇ. ಆಗಿನಿಂದಲೂ ನಾನು ನಮ್ಮ ಕನ್ನಡದ ಮೇಲೆ ಬೇರೆ ಭಾಷೆಗಳ ಆಕ್ರಮಣ ನಮ್ಮ ಮೇಲೆ ಯಾವ ಮಟ್ಟಕ್ಕೆ ಇದೆ ಎಂಬುದನ್ನು ಬಹಳ ಹತ್ತಿರದಿಂದ ಕಂಡಿದ್ದೇನೆ. ಪ್ರತಿಯೊಬ್ಬ ಮನುಷ್ಯನಿಗೂ ತನ್ನ ಮಾತೃಭಾಷೆ ಜೀವನ ಮಾಡುವ ಬಗ್ಗೆ ಮತ್ತು ಜೀವನ ಶೈಲಿಯನ್ನು ಕಲಿಸುತ್ತದೆ. ಹಾಗಂತ ನಾನು ಹಿಂದಿ ಕಲಿಯುವುದೇ ಇಲ್ಲ ಅಂತ ಹೇಳುತ್ತಿಲ್ಲ. ಕಲಿಯುತ್ತೇನೆ. ಅದರ ಅವಶ್ಯಕತೆ ನನಗೆ ಎಷ್ಟಿದೆಯೋ ಅಷ್ಟು ಮಾತ್ರ. ಅದನ್ನು ಬಿಟ್ಟು ಸಂಪೂರ್ಣವಾಗಿ ನಮ್ಮ ಮೇಲೆ ಹೇರಲು ಬಂದರೆ ನಾವು ಎಂದಿಗೂ ಸುಮ್ಮನೆ ಕೂರುವುದಿಲ್ಲ ಎಂದಿದ್ದಾರೆ.

ರಿಷಬ್ ಶೆಟ್ಟಿ

ಇನ್ನೂ ನಟ ರಿಷಬ್ ಶೆಟ್ಟಿ ಅವರು ಸಹ ಹಿಂದಿ ಹೇರಿಕೆ ವಿರೋಧಿಸಿ ಟ್ವೀಟ್ಮಾಡಿದ್ದಾರೆ. “ ಸುಳಿದಿಟ್ಟ ರಸಬಾಲೆಯಷ್ಟು ಸುಲಲಿತವಾದ ಭಾಷೆ ನಮ್ಮದಿರುವಾಗ, ಇನ್ನೊಂದು ಭಾಷೆಯ ಅಗತ್ಯವಾದ್ರೂ ಏನು..? ನಾವು ಕನಸು ಕಾಣೋ ಬಾಷೆ, ನಮ್ಮ ನಾಲಿಗೆಯಾಡಲು ಬಿಡಿ. ಓಲೈಸುವ ನೆಪದಿ ನಮ್ಮ ಕಂದಮ್ಮಗಳಾಡೋ ‘ಅಮ್ಮ’ ಪದದಿಂದ ‘ಅ‘ ತೆಗೆದು ‘’ಮಾ’ ಉಳಿಸುವ ನಿಮ್ಮ ಪ್ರಯತ್ನಕ್ಕೆ ಧಿಕ್ಕಾರವಿರಲಿ..! # StopHindiImposition ಜೈ ಕರ್ನಾಟಕ ಮಾತೆ” ಎಂದು ಬರೆದುಕೊಂಡಿದ್ದಾರೆ.

ಇನ್ನೂ ಇತ್ತೀಗೆ ಪ್ರಕಾಶ್ ರಾಜ್, ಡಾಲಿ ಧನಂಜಯ್, ಆದಿನಗಳು ಚೇತನ್ ಸಹ ಹಿಂದಿ ಹೇರಿಕೆ ದಿವಸ್ ಆಚರಣೆಗೆ ವಿಭಿನ್ನವಾಗಿ ವಿರೋಧ ವ್ಯಕ್ತಪಡಿಸಿದ್ದರು. “ಹಿಂದಿ ಗೊತ್ತಿಲ್ಲ” ನಮಗೆ ಗೊತ್ತಿರೋದು ಕೇವಲ ಕನ್ನಡ ಎಂಬ ವಾಕ್ಯವರಿರುವ ಟಿ – ಶರ್ಟ್ ಧರಿಸಿ ಕನ್ನಡಾಭಿಮಾನ ಮೆರೆದು ಕನ್ನಡಿಗರ ಪ್ರೀತಿಗೆ ಪಾತ್ರವಾಗಿದ್ರು.

 

Leave a Reply

Your email address will not be published. Required fields are marked *

Recent Posts

YOU MUST READ

Pin It on Pinterest

Share This