ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಜ್ವರದಿಂದ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ.
ದರ್ಶನ್ ಸದ್ಯ ತೀವ್ರ ಜ್ವರದಿಂದ ಬಳಲುತ್ತಿದ್ದು, ಹಿರಿಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ದರ್ಶನ್‌ಗೆ (Darshan) ಜೈಲಿನಲ್ಲಿಯೇ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಗೆ ಕಳೆದ ಮೂರು ದಿನಗಳಿಂದ ಆರೋಗ್ಯ ಕೈಕೊಟ್ಟಿದೆ. ಜ್ವರದಿಂದ ಬಳಲುತ್ತಿದ್ದ ನಟನಿಗೆ ಜೈಲಿನ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಚಿಕಿತ್ಸೆಯ ನಂತರ ನಟನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಈ ಸುದ್ದಿ ತಿಳಿದ ಫ್ಯಾನ್ಸ್ ಇದೀಗ ನಿರಾಳವಾಗಿದ್ದಾರೆ.








