‘ಕನ್ನಡದ ಧ್ವಜಕ್ಕೆ ಬೆಂಕಿ ಹಚ್ಚಿದ ಹೇಡಿಗಳ’ವಿರುದ್ಧ ಕ್ರಮಕ್ಕೆ ನಟ ದರ್ಶನ್ ಆಗ್ರಹ
ಇತ್ತೀಚೆಗೆ MES ಪುಂಡರು ಪ್ರತಿಭಟನಾ ರ್ಯಾಲಿಯಲ್ಲಿ ಉದ್ಧಟತನ ಮೆರೆದಿದ್ದರು.. ನಮ್ಮ ಕನ್ನಡದ ಬಾವುಟಕ್ಕೆ ಬೆಂಕಿ ಹಚ್ಚಿದ್ದೂ ಅಲ್ಲದೇ , ಕನ್ನಡ ಪರ ಹೋರಾಟಗಾರರ ವಿರುದ್ಧವೇ ಕೊಲೆ ಯತ್ನದ ದೂರು ದಾಖಲಿಸಿ ಕಿಡಿಗೇಡಿತನ ಪ್ರದರ್ಶಿಸಿದ್ದರು.. ಈ ಪುಂಡರ ಪುಂಡಾಟ ಹಾಗೂ ಕನ್ನಡ ಪರ ಹೋರಾಟಗಾರರನ್ನ ಬಂಧಿಸಿದ ವಿರುದ್ಧ ಕನ್ನಡಿಗರು ಹಾಗೂ ಕನ್ನಡ ಸಿನಿಮಾರಂಗದ ತಾರೆಯರು ಸಿಡಿದೆದ್ದಿದ್ದಾರೆ..
ಕನ್ನಡ ಪರ ಹೋರಾಟಗಾರರ ಮೇಲೆ ಕೊಲೆ ಯತ್ನ ದೂರು ದಾಖಲಿಸಿರುವ ಹಿನ್ನೆಲೆ , ಪೊಲೀಸರು ಕನ್ನಡಪರ ಹೋರಾಟಗಾರ ಸಂಪತ್‌ಕುಮಾರ್ ಹಾಗೂ ಇನ್ನಿಬ್ಬರನ್ನು ಬಂಧಿಸಿದ್ದಾರೆ. ಪ್ರತಿಭಟನೆ ವೇಳೆ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಲಾಗಿದೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಕನ್ನಡ ಬಾವುಟ ಸುಟ್ಟಿರುವುದು ಗಂಭೀರ ಸ್ವರೂಪ ಪಡೆದುಕೊಂಡಿದೆ. ಕನ್ನಡಿಗರು ನಿಗಿ ನಿಗಿ ಕೆಂಡಕಾರುತ್ತಿದ್ದಾರೆ..
ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ @CMofKarnataka pic.twitter.com/n8ullGB1FK
— Darshan Thoogudeepa (@dasadarshan) December 15, 2021
ಕನ್ನಡ ಸಿನಿಮಾ ತಾರೆಯರು ಈಗ ಪ್ರಕರಣದ ವಿರುದ್ಧ ಆಕ್ರೋಶ ಹೊರಹಾಕ್ತಿದ್ದಾರೆ.. ನವರಸ ನಾಯಕ ಜಗ್ಗೇಶ್ , ಶಿವರಾಜ್ ಕುಮಾರ್ ಸೇರಿದಂತೆ ಸ್ಯಾಂಡಲ್ ವುಡ್ ತಾರೆಯರು ಕಿಡಿಕಾರುತ್ತಿದ್ದಾರೆ.. ಈ ನಡುವೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪ್ರತಿಕ್ರಿಯೆ ನೀಡಿ ಧ್ವಜ ಸುಟ್ಟ ಹೇಡಿಗಳಿಗೆ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ..
“ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ” ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.. ಈ ಟ್ವೀಟ್ ಅನ್ನ ಮುಖ್ಯಮಂತ್ರಿ ಬಸವರಾಜಜ ಬೊಮ್ಮಾಯಿ ಅವರಿಗೆ ಟ್ಯಾಗ್ ಮಾಡಿದ್ದಾರೆ.