ಸಪ್ಲೈಯರ್ ಮೇಲೆ ದರ್ಶನ್ ರಿಂದ ಹಲ್ಲೆ ಪ್ರಕರಣ : ಪೊಲೀಸರಿಂದ ಸಂತ್ರಸ್ತನ ವಿಚಾರಣೆ
ಬೆಂಗಳೂರು: ಕಳೆದ ಒಂದು ವಾರದಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಒಮ್ಮೆ 25 ಕೋಟಿ ವಂಚನೆ ಪ್ರಕರಣದಲ್ಲಿ ಸುದ್ದಿಯಾದ್ರೆ , ಮತ್ತೊಮ್ಮೆ ಸಂದೇಶ್ ರೆಸ್ಟೋರೆಂಟ್ ನ ಸಪ್ಲೈಯರ್ ಗೆ ಹೊಡೆದ ಆರೋಪದ ಪ್ರಕರಣದಲ್ಲಿ ಸುದ್ದಿಯಲ್ಲಿದ್ದಾರೆ.. ಈ ನಡುವೆ ಹೋಟೆಲ್ ಸಿಬ್ಬಂದಿ ಮೇಲೆ ನಟ ದರ್ಶನ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ ಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೊಡೆತ ತಿಂದ ನೌಕರ ಗಂಗಾಧರ್ ಅನ್ನು ವಿಚಾರಣೆ ಮಾಡಲಾಗುತ್ತಿದೆ.
ನಟ ದರ್ಶನ್ ಹಾಗೂ ಸ್ನೇಹಿತರು ಸಂದೇಶ್ ಪ್ರಿನ್ಸ್ ಹೋಟೆಲ್ ನಲ್ಲಿ ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ದೂರು ನೀಡಿದ್ದರು. ಈ ಸಂಬಂಧ ತನಿಖೆ ನಡೆಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮೈಸೂರು ಪೊಲೀಸ್ ಆಯುಕ್ತರಿಗೆ ನಿನ್ನೆಯೇ ಸೂಚನೆ ನೀಡಿದ್ದರು.
ಗೊಂದಲ ಬಗೆಹರಿದಿದೆ : ‘ಜೊತೆ ಜೊತೆಯಲಿ’ ಮುಗಿಯುವ ತನಕ ಅನು ಪಾತ್ರವನ್ನು ನಾನೇ ಮಾಡುತ್ತೇನೆ – ಮೇಘಾ ಶೆಟ್ಟಿ
ನಜರಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಸಂದೇಶ್ ಹೋಟೆಲ್ ಗೆ ಆಗಮಿಸಿದ ಎಸಿಪಿ ಶಶಿಧರ್, ಇನ್ಸ್ಪೆಕ್ಟರ್ ಶ್ರೀಕಾಂತ್ ಗಂಗಾಧರ್ ಅನ್ನು ಸತತ ಒಂದು ಗಂಟೆಗೂ ಹೆಚ್ಚು ಸಮಯದಿಂದ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯನ್ನು ವಿಡಿಯೋ ರೆಕಾರ್ಡ್ ಹಾಗೂ ಲಿಖಿತ ದಾಖಲೆ ಮಾಡಿಕೊಳ್ಳುತ್ತಿದ್ದಾರೆ. ಎಸಿಪಿಯನ್ನ ಬರಮಾಡಿಕೊಂಡ ಹೋಟೆಲ್ ಮಾಲೀಕ ಸಂದೇಶ್. ಘಟನೆ ನಡೆದ ಸ್ಥಳಕ್ಕೆ ಎಸಿಪಿಯನ್ನ ಕರೆದೊಯ್ದು ಮಾಹಿತಿ ನೀಡಿದ್ದಾರೆ. ಸಿಸಿಟಿವಿ ಪೋಟೇಜ್ ಅನ್ನು ಪೊಲೀಸರು ಪರಿಶೀಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ..
ಈ ನಡುವೆ ದಾಸನ ಬೆಂಬಲಕ್ಕೆ ಅನೇಕ ಸೆಲೆಬ್ರಿಟಿಗಳು ರಾಜಕಾರಣಿಗಳು ನಿಂತಿದ್ದಾರೆ.. ಈ ವಿಚಾರವಾಗಿ ದರ್ಶನ್ ವಿರುದ್ಧ ಇಂದ್ರಜಿತ್ ಆರೋಪ ಮಾಡಿದ್ದಾರೆ.. ಆದ್ರೆ ದರ್ಶನ್ ಬಹಳ ಮುಗ್ದ, ಕೆಳಹಂತದಿಂದ ಈ ಮಟ್ಟಕ್ಕೆ ಬೆಳೆದು ಬಂದಿರುವ ನಟ. ಅವರ ಏಳಿಗೆ ಸಹಿಸಲಾಗದವರು ದುರುದ್ದೇಶದಿಂದ ಇಂತಹ ಕೇಸ್ಗಳನ್ನು ಹಾಕುತ್ತಿರಬಹುದು. ದರ್ಶನ್ ಬಹಳ ಮುಗ್ಧ. ಯಾವುದೇ ಕೆಟ್ಟ ಕೆಲಸ ಮಾಡಲ್ಲ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಡಿ ಬಾಸ್ ಪರ ಬ್ಯಾಟ್ ಬೀಸಿದ್ದಾರೆ.








