ಕನ್ನಡದ ಅಭಿಮಾನಿಗಳಿಗೆ ನಟ ದರ್ಶನ್ ಧನ್ಯವಾದ ಅರ್ಪಿಸಿದ್ದಾರೆ.
ದಚ್ಚು ಅಭಿನಯಿಸಿರುವ ‘ಕಾಟೇರ’ ಸಿನಿಮಾ (Kaatera Movie) ಭರ್ಜರಿ ಯಶಸ್ಸು ಪಡೆಯುತ್ತಿದೆ. ಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ದರ್ಶನ್ ಅಭಿಮಾನಿಗಳು ಕೂಡ ಭರ್ಜರಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ನಿರ್ದೇಶಕ ತರುಣ್ ಸುಧೀರ್ (Tharun Sudhir) ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಿನಿಮಾದ ಸ್ಟೋರಿಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಚಿತ್ರ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು, ದರ್ಶನ್ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.
ಏನೆಂದು ನಾ ಹೇಳಲಿ.. ನಿಮ್ಮಯ ಪ್ರೀತಿ-ಆಶೀರ್ವಾದಕೆ ಕೊನೆಯೆಲ್ಲಿ? ಧನ್ಯೋಸ್ಮಿ ಸೆಲೆಬ್ರಿಟಿಸ್.. ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ. ಈ ಪ್ರೀತಿಯ ಚಪ್ಪಾಳೆಯಿಂದ ನಮ್ಮ ಕಾಟೇರ ಚಿತ್ರತಂಡದ ಮನ ತುಂಬಿದೆ. ಮಾತುಗಳೇ ಬರುತ್ತಿಲ್ಲ’ ಎಂದು ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
‘ಕಾಟೇರ’ ಸಿನಿಮಾದಲ್ಲಿ ಹಿರಿಯ ನಟಿ ಮಾಲಾಶ್ರೀ ಅವರ ಮಗಳು ಆರಾಧನಾ ನಾಯಕಿ ಆಗಿದ್ದಾರೆ. ಶ್ರುತಿ, ವೈಜನಾಥ ಬಿರಾದಾರ, ಅವಿನಾಶ್, ವಿನೋದ್ ಆಳ್ವಾ, ಜಗಪತಿ ಬಾಬು, ಕುಮಾರ್ ಗೋವಿಂದ್ ಸೇರಿದಂತೆ ಹಲವರು ನಟಿಸಿದ್ದಾರೆ.