ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case)ಲ್ಲಿ ಜೈಲು ಪಾಲಾಗಿರುವ ದರ್ಶನ್ ಮತ್ತು ಗ್ಯಾಂಗ್ ನ (Darshan And Gang) ನ್ಯಾಯಾಂಗ ಬಂಧನ ಅವಧಿಯನ್ನು ಕೋರ್ಟ್ ವಿಸ್ತರಿಸಿದೆ.
ಈ ಅವಧಿಯನ್ನು ಕೋರ್ಟ್ ಆಗಸ್ಟ್ 14 ರವರೆಗೆ ವಿಸ್ತರಿಸಿದೆ. ಎಲ್ಲಾ ಆರೋಪಿಗಳನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಿಂದ 13 ಜನ ಆರೋಪಿಗಳು, ತುಮಕೂರು ಜೈಲಿನಿಂದ 4 ಆರೋಪಿಗಳನ್ನ ಹಾಜರು ಪಡಿಸಲಾಗಿತ್ತು.
ದರ್ಶನ್, ಪವಿತ್ರಾಗೌಡ, ಪವನ್, ಪ್ರದೂಷ್, ವಿನಯ್, ದೀಪಕ್ ಸೇರಿ 17 ಮಂದಿ ಅರೆಸ್ಟ್ ಆಗಿದ್ದು ಪುನಃ ನ್ಯಾಯಾಂಗ ಬಂಧನ ವಿಸ್ತರಣೆ ಮಾಡುವಂತೆ ಎಸ್‌ಐಟಿ ನ್ಯಾಯಾಧೀಶರ ಮುಂದೆ ರಿಮ್ಯಾಂಡ್ ಕಾಪಿ ಸಲ್ಲಿಸಿ ಮನವಿ ಮಾಡಲಾಗಿತ್ತು. ಕೋರ್ಟ್ ಆ. 14ರ ವರೆಗೂ ನ್ಯಾಯಾಂಗ ಬಂಧನ ವಿಸ್ತರಿಸಿದೆ.








