ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಈಗ ಜಾಮೀನು ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಈ ಮಧ್ಯೆ ಜಾಮೀನು ಸಿಗಬಹುದು ಎಂಬ ಖುಷಿಯಲ್ಲಿ ಇದ್ದಂತೆ ಜೈಲಲ್ಲಿ ಕಾಣುತ್ತಿದ್ದಾರೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಅಲ್ಲದೇ, ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಕೂಡ ಸಿಕ್ಕಿದೆ. ಈ ಮಧ್ಯೆ ತಮಗೂ ಜಾಮೀನು ಸಿಗಬಹುದು ಎಂಬ ನಿರೀಕ್ಷೆಯಲ್ಲಿ ದರ್ಶನ್ ಇದ್ದಂತಿದೆ. ಅವರ ಮುಖದಲ್ಲಿ ನಗು ಕಾಣಿಸಿದೆ.
ದರ್ಶನ್ ಪರ ವಕೀಲರು ಬಳ್ಳಾರಿ ಜೈಲಿಗೆ ಹೋಗಿ ಒಂದಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡಿ ಬಂದಿದ್ದಾರೆ. ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನು ಸಿಗದಿದ್ದರೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ಚಿಂತನೆ ನಡೆದಿದೆ ಎನ್ನಲಾಗಿದೆ. ಹೀಗಾಗಿ ಎಲ್ಲ ತಯಾರಿ ಕೂಡ ನಡೆದಿದೆ ಎಂದು ತಿಳಿದು ಬಂದಿದೆ.