ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಇನ್ನೂ ಟೆನ್ಶನ್ ನಲ್ಲೇ ಬದುಕುವಂತಾಗಿದೆ.
ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದ್ದು, ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್ ಗೆ ಮತ್ತೆ ನಿರಾಸೆಯಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಗುರುವಾರಕ್ಕೆ ಮುಂದೂಡಿದೆ. ಹೀಗಾಗಿ ದರ್ಶನ್ ಗೆ ಆತಂಕ ಶುರುವಾಗಿದೆ.
ಅಲ್ಲದೇ, ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಹಾಗೂ ಆರೋಪಿಗಳಾದ ರವಿಶಂಕರ್, ದೀಪಕ್, ಲಕ್ಷ್ಮಣ್, ನಾಗರಾಜ್ ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಕೋರ್ಟ್ ಅ.14ಕ್ಕೆ ಕೋರ್ಟ್ ಕಾಯ್ದಿರಿಸಿದೆ.