ಬೆಂಗಳೂರು: ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Darshan) ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4 ಮುಂದೂಡಿ ಕೋರ್ಟ್ ಆದೇಶ ನೀಡಿದೆ.
ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು 57ನೇ ಸೆಷನ್ ಕೋರ್ಟ್ ನಡೆಸಿತು. ಪವಿತ್ರ ಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು. ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನೂ ಮುಂದೂಡಲಾಗಿದೆ. ದರ್ಶನ್ ಮತ್ತು ಲಕ್ಷ್ಮಣ್ ಇಬ್ಬರ ಅರ್ಜಿ ಮುಂದೂಡಲಾಗಿದೆ.