ಕೊಲೆ ಆರೋಪಿ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಹೀಗಾಗಿ ಮತ್ತೊಮ್ಮೆ ದರ್ಶನ ಹಾಗೂ ಅಭಿಮಾನಿಗಳಿಗೆ ನಿರಾಸೆಯಾಗಿದೆ.
ಜಾಮೀನು ಅರ್ಜಿಗೆ ಇಂದು ಎಸ್.ಪಿ.ಪಿ ಪ್ರಸನ್ನ ಕುಮಾರ್ ಆಕ್ಷೇಪಣೆ ಸಲ್ಲಿಸಿದ್ದರು. ಆಕ್ಷೇಪಣೆ ವಾದವನ್ನು ಸೋಮವಾರ ಮಂಡಿಸುವುದಾಗಿ ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಹೀಗಾಗಿ ವಿಚಾರಣೆಯನ್ನು ಸೆ. 30ಕ್ಕೆ ಮುಂದೂಡಲಾಗಿದೆ.
ಈಗಾಗಿ ಐಟಿ ಅಧಿಕಾರಿಗಳು ಜೈಲಿಗೆ ತೆರಳಿ ವಿಚಾರಣೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ನಂತರ ಶವ ವಿಲೇವಾರಿ, ಸಾಕ್ಷ್ಯ ನಾಶಕ್ಕಾಗಿ ದರ್ಶನ್ ಲಕ್ಷ ಲಕ್ಷ ಕಾಸು ನೀಡುವ ಭರವಸೆ ನೀಡಿದ್ದರು. ಈ ಕುರಿತು ಹಣದ ವಿಷಯವಾಗಿ ಬರೋಬ್ಬರಿ 7 ಗಂಟೆ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ರೇಣುಕಾಸ್ವಾಮಿ ಕೊಲೆಯಾದ ನಂತರ ಅಷ್ಟೊಂದು ಹಣ (Money) ಹೇಗೆ ಬಂತು? ಆ ಹಣ ಯಾರಿಗೆ ಸೇರಿದ್ದು? ಆ ಹಣವನ್ನು ನಿಮಗೆ ತಂದುಕೊಟ್ಟಿದ್ಯಾರು? ಸೇರಿದಂತೆ ಹಲವಾರು ಪ್ರಶ್ನೆಗಳನ್ನು ಐಟಿ ಅಧಿಕಾರಿಗಳು ಕೇಳಿದ್ದಾರೆ ಎನ್ನಲಾಗಿದೆ. ಈಗ ನಟ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದ್ದು, ಸೆ. 30ಕ್ಕೆ ಭವಿಷ್ಯ ನಿರ್ಧಾರವಾಗಬಹುದೇ? ಕಾಯ್ದು ನೋಡಬೇಕಿದೆ.