ನಟ ದರ್ಶನ್ (Darshan) ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಪೊಲೀಸರ ವಶದಲ್ಲಿದ್ದಾರೆ. ಈ ಮಧ್ಯೆ ಅವರ ಪತ್ನಿ ವಿಜಯಲಕ್ಷ್ಮೀ (Vijayalakshmi Darshan) ರೇಣುಕಾಸ್ವಾಮಿ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಎಲ್ಲಕ್ಕಿಂತ ಮೊದಲು, ಮೃತ ರೇಣುಕಾ ಸ್ವಾಮಿ ಕುಟುಂಬದವರಿಗೆ ನನ್ನ ಸಂತಾಪಗಳು’ ಎಂದು ವಿಜಯಲಕ್ಷ್ಮಿ ಅವರು ಬರೆದುಕೊಂಡಿದ್ದಾರೆ. ಅಲ್ಲದೇ, ಕೆಲವು ಪ್ರಮುಖ ವಿಚಾರಗಳನ್ನು ಅವರು ತಿಳಿಸಿದ್ದಾರೆ. ದರ್ಶನ್ ಹಾಗೂ ಅವರ ಕುಟುಂಬದವರಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಸುಳ್ಳು ಸುದ್ದಿ ಹರಡದಂತೆ ಅವರು ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ. ಆ ಬಗ್ಗೆಯೂ ವಿಜಯಲಕ್ಷ್ಮಿ ತಿಳಿಸಿದ್ದಾರೆ.
ಅಧಿಕಾರಿಗಳು ನೀಡುವ ಅಧಿಕೃತ ಮಾಹಿತಿಯನ್ನು ಮಾತ್ರ ಪ್ರಸಾರ ಮಾಡಬೇಕು ಎಂದು ನಾನು ಎಲ್ಲರನ್ನೂ ಒತ್ತಾಯಿಸುತ್ತೇನೆ. ಚಾಮುಂಡೇಶ್ವರಿ ತಾಯಿ ಬಗ್ಗೆ ಮತ್ತು ನಮ್ಮ ಕಾನೂನಿನ ಬಗ್ಗೆ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಕ್ಕೆ ಜಯ ಸಿಗಲಿ. ಸತ್ಯಮೇವ ಜಯತೆ’ ಎಂದು ವಿಜಯಲಕ್ಷ್ಮಿ ಪೋಸ್ಟ್ ಮಾಡಿದ್ದಾರೆ. ನ್ಯಾಯಾಲಯದ ಆದೇಶಪ್ರತಿಯನ್ನು ಅವರು ಹಂಚಿಕೊಂಡಿದ್ದಾರೆ.