Dasara 2022 – ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ
ಮೈಸೂರು : ವಿರೋಧದ ನಡುವೆಯೂ ಇಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಮಾಡಲಾಗಿದೆ.
ನಗರದ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಪಾರ್ಕ್ ನಲ್ಲಿ ದಸರಾ ಆಚರಿಸಲಾಗಿದೆ.
ಮಹಿಷ ದಸರಾ ಹೊರಟ ಸಮಿತಿಯಿಂದ ಬೆಳಗ್ಗೆ 10 ಗಂಟೆಗೆ ಮಹಿಷನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಗಿದೆ.

ಮೆರವಣಿಗೆಗೆ ಪೊಲೀಸರಿಂದ ಅನುಮತಿ ನಿರಾಕರಣೆ ಹಿನ್ನೆಲೆ ನಗರದ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಪಾರ್ಕ್ ನಲ್ಲಿ ಉರಿಲಿಂಗಿ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ನೇತೃತ್ವದಲ್ಲಿ ಮಹಿಷ ದಸರಾ ಆಚರಣೆ ಮಾಡಲಾಗಿದೆ.
ಇದರಲ್ಲಿ ಹಿರಿಯ ಸಾಹಿತಿ ಪ್ರೊ. ಭಗವಾನ್, ಪ್ರೊ.ಮಹೇಶ್ ಚಂದ್ರಗುರು ಸೇರಿದಂತೆ ಹಲವರು ಭಾಗಿಯಾಗಿದ್ದರು.
ಮಹಿಷ ದಸರಾ ಆಚರಣೆ ಹಿನ್ನೆಲೆಯಲ್ಲಿ ಪಾರ್ಕ್ ನ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಹಮ್ಮಿಕೊಳ್ಳಲಾಗಿತ್ತು.








