ನಾನಿ ನಟನೆಯ ‘ದಸರಾ’ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಸಾಥ್…..
ಟಾಲಿವುಡ್ ನ ನ್ಯಾಚುರಲ್ ಸ್ಟಾರ್ ನಟ ನಾನಿ ದಸರಾ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲು ಸಿದ್ದರಾಗಿದ್ದಾರೆ. ಇಂದು ಸಂಜೆ 4 ಗಂಟೆಗೆ ದಸರಾ ಚಿತ್ರದ ಟೀಸರ್ ಸಹ ಬಿಡುಗಡೆಯಾಗಲಿದೆ.
ದಸರಾ ಚಿತ್ರದ ಕನ್ನಡ ಅವತರಣಿಕೆಗೆ ಕನ್ನಡದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸಾಥ್ ನೀಡುತ್ತಿದ್ದು, ಕನ್ನಡ ಟೀಸರ್ ರಿಲೀಸ್ ಮಾಡಲಿದ್ದಾರೆ. ಈ ಮೂಲಕ ರಕ್ಷಿತ್ ಶೆಟ್ಟಿ ನಾನಿ ಚಿತ್ರಕ್ಕೆ ಕೈಜೋಡಿಸುತ್ತಿದ್ದಾರೆ. 5 ಭಾಷೆಯ ಐದು ಪ್ರಮುಖ ನಟರು ದಸರಾ ಚಿತ್ರದ ಟೀಸರ್ ರಿಲೀಸ್ ಮಾಡಲಿದ್ದಾರೆ.
ಹಿಂದಿ ಚಿತ್ರರಂಗದಿಂದ ಶಾಹಿದ್ ಕಪೂರ್, ಕಾಲಿವುಡ್ ಸ್ಟಾರ್ ಹೀರೋ ಧನುಷ್, ಕನ್ನಡದ ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ, ಮಲಯಾಳಂನ ಜನಪ್ರಿಯ ಹೀರೋ ದುಲ್ಕರ್ ಸಲ್ಮಾನ್ ಅವರು ‘ದಸರಾ’ ಸಿನಿಮಾದ ಟೀಸರ್ ಬಿಡುಗಡೆ ಮಾಡಲಿದ್ದಾರೆ.
ದಸರಾ ಸಿನಿಮಾದಲ್ಲಿ ನಾನಿ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದು, ನಾನಿಗೆ ಜೊತೆಯಾಗಿ ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ. ಚಿತ್ರಕ್ಕೆ ಶ್ರೀಕಾಂತ್ ಒಡ್ಡೆಲಾ ನಿರ್ದೇಶನ ಮಾಡುತ್ತಿದ್ದು, ಶ್ರೀಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್’ ಬ್ಯಾನರ್ ಮೂಲಕ ಸುಧಾಕರ್ ಚೆರುಕುರಿ ಅವರು ಬಂಡವಾಳ ಹೂಡುತ್ತಿದ್ದಾರೆ.
Dasara : Rakshit Shetty to join Nani starrer ‘Dasara’ Movie








