ಎಐಸಿಸಿ AICC ಅಧ್ಯಕ್ಷ ಸ್ಥಾನ ಆಯ್ಕೆ ಚುನಾವಣೆಗೆ ಡೇಟ್ ಫಿಕ್ಸ್
ನವದೆಹಲಿ : ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಇಂದು ನಡೆದ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆ ನಡೆಯಿತು.
ಈ ಸಭೆಯಲ್ಲಿ ಜೂನ್ 23ರಂದು ಎಐಸಿಸಿ ಅಧ್ಯಕ್ಷ ಸ್ಥಾನ ಆಯ್ಕೆಗೆ ಚುನಾವಣೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲುಂಡ ಹಿನ್ನೆಲೆ ನೈತಿಕ ಹೊಣೆ ಹೊತ್ತು ರಾಹುಲ್ ಗಾಂಧಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.