ಪಾಲಿಕೆಯಲ್ಲಿ ಬಹುಮತ ಪಡೆದಿರುವ ಬಿಜೆಪಿಯಿಂದ ಹಿಂದುಳಿದ ವರ್ಗ ಎ ಹಾಗೂ ಉಪ ಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಸ್ಪರ್ಧಿಸಲಿದ್ದಾರೆ. ಮೇಯರ್ ಸ್ಥಾನಕ್ಕೆ 46ನೇ ಕಂಟೋನ್ಮೆಂಟ್ ವಾರ್ಡ್‍ನ ಬಿಜೆಪಿಯ ದಿವಾಕರ ಪಾಂಡೇಶ್ವರ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಉಳಿದಂತೆ ಮೇಯರ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಪಾಲಿಕೆ ಸದಸ್ಯರಾದ ಶರತ್, ಜಯಾನಂದ ಅಂಚನ್ ಸೇರಿದಂತೆ ಹಲವರ ಹೆಸರು ಕೇಳಿ ಬರುತ್ತಿದೆ.
ಕಳೆದ ವರ್ಷ ಅಂದರೆ 2019 ನವೆಂಬರ್ 12 ರಂದು ಮಂಗಳೂರು ಪಾಲಿಕೆಗೆ ಚುನಾವಣೆ ನಡೆದಿತ್ತು, ಮಹಾನಗರ ಪಾಲಿಕೆ ವ್ಯಾಪ್ತಿಯ ಒಟ್ಟು 60 ಕ್ಷೇತ್ರಗಳಲ್ಲಿ ಬಿಜೆಪಿ 44 ವಾರ್ಡ್‍ಗಳಲ್ಲಿ ದಗ್ವಿಜಯ ಸಾಧಿಸಿ ಪಾಲಿಕೆ ಗದ್ದುಗೆಯನ್ನ ತನ್ನದಾಗಿಸಿಕೊಂಡಿತ್ತು. ಆದರೆ ಮೇಯರ್ ಸ್ಥಾನದ ಹಂಚಿಕೆಯಲ್ಲಿ ಮೀಸಲಾತಿ ವಿಚಾರವಾಗಿ ಗೊಂದಲವಿದ್ದ ಕಾರಣ ಕಳೆದ ಮೂರು ತಿಂಗಳಿಂದ ಮೇಯರ್ ಗದ್ದುಗೆ ನೆನೆಗುದ್ದಿಗೆಗೆ ಬಿದ್ದಿತ್ತು.
ಇದೀಗಾ ಪ್ರಾದೇಶಿಕ ಆಯುಕ್ತರು ಫೆ.28ಕ್ಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ನಡೆಸುವ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರದ ಮೂಲಕ ತಿಳಿಸಿದ್ದಾರೆ. ಫೆ.28ರ 11:30ಕ್ಕೆ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಆರಂಭದಲ್ಲಿ ಪಾಲಿಕೆಗೆ ನೂತನವಾಗಿ ಆಯ್ಕೆಯಾಗಿರುವ 60 ಕಾಪೆರ್Çರೇಟರ್‍ಗಳ ಪ್ರಮಾಣ ವಚನ ಸ್ವೀಕಾರ ನಡೆಯಲಿದ್ದು, ಪಾಲಿಕೆ ಹೊಸ ಪರಿಷತ್ ಅಸ್ತಿತ್ವಕ್ಕೆ ಬರಲಿದೆ. ಬಳಿಕ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ನಡೆಯಲಿದೆ. ನಂತರ ಅಗತ್ಯವಿದ್ದರೆ ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಕಳೆದ ಅವಧಿಯಲ್ಲಿ ಪಾಲಿಕೆಯಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್ 14 ಸ್ಥಾನ ಪಡೆದುಕೊಂಡಿದ್ದು, ಕಳೆದ ಬಾರಿ ಒಂದು ಸ್ಥಾನವನ್ನು ಹೊಂದಿದ್ದ ಎಸ್‍ಡಿಪಿಐ ಈ ಬಾರಿ 2 ಸ್ಥಾನಗಳೊಂದಿಗೆ ವಿಪಕ್ಷ ಸ್ಥಾನದಲ್ಲಿ ಇರಲಿದೆ.








