ಹೈದರಾಬಾದ್: ತನ್ನ ಬಾಯ್ ಫ್ರೆಂಡ್ ಜೊತೆ ಮಗಳು ಮನೆಯಲ್ಲಿರುವುದನ್ನು ನೋಡಿದ ತಾಯಿ ಕೋಪದಲ್ಲಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಇಬ್ರಾಹಿಂಪಟ್ಟಣದ ತಮ್ಮ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮಗಳು ಭಾರ್ಗವಿ ತನ್ನ ಪ್ರಿಯಕರನೊಂದಿಗೆ ಇರುವುದನ್ನು ತಾಯಿ ಜಂಗಮ್ಮ ಕಂಡಿದ್ದಾರೆ. ಕೋಪಗೊಂಡ ತಾಯಿ ಕತ್ತು ಹಿಸುಕಿ ಮಗಳ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಜಂಗಮ್ಮ ಅವರು ಕೆಲಸ ಮಾಡಿ ಮನೆಗೆ ಊಟಕ್ಕೆಂದು ಬಂದಿದ್ದರು. ಈ ಸಂದರ್ಭದಲ್ಲಿ ಮಗಳು, ಬಾಯ್ ಫ್ರೆಂಡ್ ಜೊತೆ ಸಿಕ್ಕಿದ್ದಾಳೆ. ಆಗ ಪ್ರಿಯಕರನನ್ನು ಬೈದು ಮನೆಯಿಂದ ಹೊರಗೆ ಕಳುಹಿಸಿದ್ದಾಳೆ. ನಂತರ ಮಗಳ ಮೇಲೆ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ..
ಇದನ್ನು ಅಪ್ರಾಪ್ತ ಸಹೋದರ ನೋಡಿದ್ದಾನೆ. ಆತ ತಾಯಿಯ ವಿರುದ್ಧ ದೂರು ದಾಖಲಿಸಿದ್ದಾನೆ. ತಾಯಿ ತನ್ನ ಸಹೋದರಿಯ ಮೇಲೆ ಹಲ್ಲೆ ಮಾಡುವುದನ್ನು ಕಿಟಕಿಯಿಂದ ನೋಡಿದ್ದಾನೆ ಎಂದು ಇಬ್ರಾಹಿಂಪಟ್ಟಣಂ ಪೊಲೀಸ್ ಅಧಿಕಾರಿ ಸತ್ಯನಾರಾಯಣ ಹೇಳಿದ್ದಾರೆ.