ದಾವಣಗೆರೆ: ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ನೀಡಿದ್ದ ಹೇಳಿಕೆ ತೀವ್ರ ವಿರೋಧಕ್ಕೆ ಕಾರಣವಾಗಿತ್ತು.
ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಕೂಡ ಆ ಹೇಳಿಕೆಯನ್ನು ಖಂಡಿಸಿದ್ದರು. ಆದರೆ, ಸದ್ಯ ಮಾವ ಶಾಮನೂರ ಶಿವಶಂಕರಪ್ಪ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸೊಸೆ ಪ್ರಭಾ ಮಲ್ಲಿಕಾರ್ಜುನ ಸ್ಪಷ್ಟನೆ ನೀಡಿದ್ದಾರೆ.
ಜಿಲ್ಲೆಯ ಹರಿಹರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಂತರ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಕಮಲವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅರ್ಪಿಸುವೆ ಎಂದಿದ್ದರು. ಆ ಹೇಳಿಕೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ಗೆ ಮಾತ್ರ ಸೀಮಿತ. ಈಗಾಗಲೇ ಈ ವಿಚಾರದ ಬಗ್ಗೆ ಪಕ್ಷದ ಮುಖಂಡರು ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದ್ದಾರೆ.