ಇಟಲಿಯ ರೋಮ್ ನಲ್ಲಿ ಸಿಲುಕಿಕೊಂಡಿದ್ದ ಅರಣ್ಯ ಸಚಿವ ಆನಂದ್ ಸಿಂಗ್ ಅವರ ಪುತ್ರಿ ಬೆಂಗಳೂರಿಗೆ ವಾಪಸಾಗಿದ್ದಾರೆ.
ಕಳೆದ ಒಂದು ವಾರದಿಂದ ಸಚಿವ ಆನಂದ್ ಸಿಂಗ್ ಅವರ ಹಿರಿಯ ಪುತ್ರಿ ಇಟಲಿ ದೇಶದ ರೋಮ್ ನಗರದ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದರು. ಆನಂದ್ ಸಿಂಗ್ ಹಿರಿಯ ಪುತ್ರಿ ಇಟಲಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಕೊರೊನಾ ಸೋಂಕಿನಿಂದ ಇಟಲಿಯಲ್ಲಿ ಪರಿಸ್ಥಿತಿ ಹದಗೆಟ್ಟಿತು. ಇದರಿಂದಾಗಿ ಇಟಲಿಯಲ್ಲಿದ್ದ ಭಾರತೀಯರು, ಭಾರತಕ್ಕೆ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಮಾರ್ಚ್ 11ರಂದು ಇಟಲಿಯಲ್ಲಿರುವ ವಿದ್ಯಾರ್ಥಿಗಳು ಭಾರತಕ್ಕೆ ವಾಪಸಾಗಲು ರೋಮ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಆದರೆ ಕೊರೊನಾ ಸೋಂಕು ತಗುಲಿಲ್ಲ ಎಂಬ ಪ್ರಮಾಣ ಪತ್ರ ಇಲ್ಲದವರಿಗೆ ವಿಮಾನದಲ್ಲಿ ಪ್ರಯಾಣಿಸಲು ಅಲ್ಲಿನ ಸರಕಾರ ನಿರ್ಬಂಧ ವಿಧಿಸಿತ್ತು. ಹಾಗಾಗಿ ಆನಂದ್ ಸಿಂಗ್ ಪುತ್ರಿ ರೋಮ್ ನ ವಿಮಾನ ನಿಲ್ದಾಣದಲ್ಲಿ ಅತಂತ್ರರಾಗಿದ್ದು, ಪುತ್ರಿಯನ್ನು ಭಾರತಕ್ಕೆ ಕರೆತರುವುದು ಸಚಿವರಿಗೆ ಸಮಸ್ಯೆಯಾಗಿ ಪರಿಣಮಿಸಿತ್ತು.
ಆದರೆ ನಿನ್ನೆ ಬೆಳಗ್ಗೆ 8 ಗಂಟೆಯ ಸುಮಾರಿಗೆ ಆನಂದ್ ಸಿಂಗ್ ಪುತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಸಚಿವರ ಪುತ್ರಿಯ ಜೊತೆಯಲ್ಲಿ ರೋಮ್ ನಲ್ಲಿ ಸಿಲುಕಿದ್ದ 15 ಜನ ಕೂಡ ವಾಪಸ್ ಆಗಿದ್ದಾರೆ. ಬೆಂಗಳೂರಿಗೆ ಬಂದ ಸಚಿವರ ಪುತ್ರಿ ಸೇರಿದಂತೆ 15 ಜನರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ರೋಮ್‍ನಿಂದ ಬಂದ 16 ಜನರಲ್ಲಿ ಯಾರಿಗೂ ಕೊರೊನಾ ಸೋಂಕು ತಗುಲಿಲ್ಲ ಎಂದು ಕಂಡುಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇರಿಸಿ ನಿಗಾ ಇಡಲಾಗಿದೆ.
ಕಾಂಗ್ರೆಸ್ ಶಾಸಕ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್
ಬೆಂಗಳೂರು, ಸೆ.16: ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ (Congress) ಶಾಸಕ ಕೆವೈ ನಂಜೇಗೌಡ (KY Nanjegowda) ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ, ಮತ...








