Davanagere : ಚಾಕ್ಲೇಟ್ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ….
ಚಾಕ್ಲೇಟ್ ಕೊಡಿಸುವ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆಯೊಂದು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪೋಷಕರು ಬಾಲಕಿ ಯನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಮನೆ ಮುಂದೆ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ ಬಾಲಕಿಯನ್ನ ಗಮನಿಸಿದ ವ್ಯಕ್ತಿ, ಹುಡುಗಿಗೆ ಚಾಕಲೇಟ್ ಕೊಡಿಸುವ ಆಸೆ ತೊರಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸೆಗಿದ್ದಾನೆ.
ಇತ್ತ ಪೋಷಕರು ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸ್ ಆದಾಗ ವಿಷಯ ಬೆಳಕಿಗೆ ಬಂದಿದೆ. ಕೂಡಲೇ ಬಾಲಕಿಯ ತಂದೆ-ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಾಗಿ 24 ಗಂಟೆ ಒಳಗೆ ಆರೋಪಿಯನ್ನು ಬಂಧಿಸಿದ್ದಾರೆ.
ಘಟನೆ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Rape on girl on the pretext of giving chocolate in Davangere