ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 265 ಜನರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಇನ್ನೂ ಕಿಲ್ಲರ್ ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ.
ಇನ್ನೂ 178 ಮಂದಿ ಸೊಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 4915ಕ್ಕೇರಿದೆ. ಜಿಲ್ಲೆಯಲ್ಲಿನ ಒಟ್ಟು 7044 ಸೋಂಕು ಪ್ರಕರಣಗಳ ಪೈಕಿ 1974 ಸಕ್ರಿಯ ಪ್ರಕರಣಗಳು ಇವೆ. ಇನ್ನೂ ಇಲ್ಲಿಯವರೆಗೂ ಜಿಲ್ಲೆಯಲ್ಲಿ ಮಹಾಮಾರಿಗೆ ಒಟ್ಟು 155 ಮಂದಿ ಪ್ರಾಣ ಬಿಟ್ಟಿದ್ದಾರೆ.