ವಾಲ್ಮೀಕಿ ಸಮಾಜಕ್ಕೆ ಮೀಸಲಾತಿಗಾಗಿ ಪ್ರೀಡಂ ಪಾರ್ಕ್‌ನಲ್ಲಿ ಧರಣಿ: ಪ್ರಸನ್ನಾನಂದಪುರಿ ಸ್ವಾಮೀಜಿ Saaksha Tv
ದಾವಣಗೆರೆ : ವಾಲ್ಮೀಕಿ ಸಮಾಜಕ್ಕೆ ಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ನಾಳೆಯಿಂದಲೇ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ತಿಳಿಸಿದರು.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಪ್ರಸನಾನಂದಪುರಿ ಸ್ವಾಮೀಜಿಯವರು ಮಾತನಾಡಿ, ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಶೇ. 7.5 ಮೀಸಲಾತಿ ಕಲ್ಪಿಸುವುದಾಗಿ ಭರವಸೆ ನೀಡಿದ್ದರು. ಆದರೆ ನಿವೃತ್ತ ನ್ಯಾ. ನಾಗಮೋಹನ್ ದಾಸ್ ವರದಿ ಬಳಿಕ ಮೀಸಲಾತಿ ಕಲ್ಪಿಸುವುದಾಗಿ ಹೇಳಿದ್ದರು.
ಈಗ ನಾಗಮೋಹನ್ ದಾಸ ವರದಿ ಸರ್ಕಾರಕ್ಕೆ ಸಲ್ಲಿಕೆ ಆಗಿದೆ. ಆದರೆ, ನಿರ್ಧಾರ ಮಾತ್ರ ಸರ್ಕಾರ ತೆಗೆದುಕೊಳ್ಳುತ್ತಿಲ್ಲ. ಇದೇ ಕಾರಣಕ್ಕೆ ನಮ್ಮ ಸಮಾಜದವರೇ ನನ್ನ ಬಗ್ಗೆ ಬೇಸರ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಭಾವನೆ ವ್ಯಕ್ತಪಡಿಸುತ್ತಿದ್ದಾರೆ.
ಇದರಿಂದ ನನ್ನ ಮನಸ್ಸಿಗೆ ಬೇಸರವಾಗಿದೆ. ನಮ್ಮ ಸಮಾಜಕ್ಕೆ ಮೀಸಲಾತಿ ಸಿಗುವತನಕ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯಲಿದೆ. ನನ್ನ ಸಮಾಜಕ್ಕೆ ಮೀಸಲಾತಿ ಪ್ರಕಟಣೆ ಆಗುವ ತನಕ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಸ್ವಾಮೀಜಿ ಹೇಳಿದರು.








