ದಾವಣಗೆರೆ | ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿ
ದಾವಣಗೆರೆ : ಪಶ್ಚಿಮ ಘಟ್ಟಗಳು ಮತ್ತು ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ತುಂಗಭದ್ರಾ ನದಿ ಮೈದುಂಬಿ ಹರಿಯುತ್ತಿದೆ.
ಈ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಜಿಲ್ಲೆಯ ಹೊನ್ನಾಳಿ, ಹರಿಹರ ಹಾಗೂ ನ್ಯಾಮತಿ ತಾಲೂಕಿನ ನದಿ ಪಾತ್ರದ ಹಳ್ಳಿಗಳು ಸಂಪೂರ್ಣವಾಗಿ ಜಲಾವೃತವಾಗಿವೆ.
ಹೊನ್ನಾಳಿ ಪಟ್ಟಣದ ಬಾಲ್ ರಾಜ್ ಘಾಟ್ ನಲ್ಲಿ 22 ಮನೆಗಳು, ಹರಿಹರ ತಾಲೂಕಿನ ಗಂಗಾನಗರದಲ್ಲಿ ಹಲವು ಮನೆಗಳು ಜಲಾವೃತವಾಗಿವೆ.
ಆದ್ದರಿಂದ ಅಂದಾಜು 240 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಇದಲ್ಲದೆ ನೀರಿನ ಮಟ್ಟ ಪರಿಶೀಲಿಸಲು ಇಬ್ಬರು ಅಧಿಕಾರಿಗಳನ್ನು ನೇಮಿಸಲಾಗಿದೆ.
ಸ್ಥಳಕ್ಕೆ ಶಾಸಕ ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










