ದಾವಣಗೆರೆ: ನಗರದ ಬೇತೂರು ರಸ್ತೆಯಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ (Davanagere Stone Pelting Case) ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದಿದ್ದ 18 ಜನರಿಗೆ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಬಂಧಿತರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರಾದ ಪ್ರಶಾಂತ್ ಆದೇಶ ಹೊರಡಿಸಿದ್ದಾರೆ. ಕೋಮುಗಲಭೆಗೆ ಸಂಬಂಧಿಸಿದಂತೆ ಗಣೇಶ ಸಮಿತಿಯ 8 ಜನ ಸೇರಿದಂತೆ ಎರಡೂ ಕೋಮಿನ 18 ಜನ ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಆರೋಪಿಗಳ ವಿಚಾರಣೆ ನಂತರ 18 ಜನರಿಗೆ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ (Judicial Custody) ವಿಧಿಸಿದರು.
ಮುದ್ದ ಬೋವಿ ಕಾಲೋನಿ ಹಾಗೂ ವೆಂಕಬೋವಿ ಕಾಲೋನಿಯ ಗಣೇಶ ಮೆರವಣಿಗೆ (Ganesh Procession) ನಡೆಯುವಾಗ ಕಲ್ಲು ತೂರಾಟ (Stone Pelting) ನಡೆದಿತ್ತು. ಘಟನೆಯಲ್ಲಿ ಪೊಲೀಸರೂ ಗಾಯಗೊಂಡಿದ್ದರು. ಮುಸ್ಲಿಂ ಮುಖಂಡರು ಪರಿಸ್ಥಿತಿಯನ್ನು ನಿಯಂತ್ರಣಗೊಳಿಸಿದ್ದರು. ಮೂರು ಕಡೆಗಳಲ್ಲಿ ಕಲ್ಲು ತೂರಾಟ ನಡೆಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವಾರು ಆರೋಪಿಗಳನ್ನು ಬಂಧಿಸಿದ್ದಾರೆ.