David Warner | ಡೆಲ್ಲಿ ಕ್ಯಾಪಿಟಲ್ಸ್ ಗೆ ವಾರ್ನರ್ ಬಲ..!!
ಈ ಬಾರಿಯ ಇಂಡಿಯನ್ ಪ್ರಿಮಿಯರ್ ಲೀಗ್ ಸೋಲು ಗೆಲುವಿನ ದಾರಿಯಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಶುಭ ಸುದ್ದಿ ಸಿಕ್ಕಿದೆ. ಶೀಘ್ರದಲ್ಲಿಯೇ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸ್ಟಾರ್ ಆಟಗಾರರ ಎಂಟ್ರಿ ಆಗಲಿದೆ.
ಹೌದು..!!! ಸೀಸನ್ 15ರ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ರಿಷಬ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೂ ಎರಡು ಪಂದ್ಯಗಳನ್ನಾಡಿದೆ. ಈ ಪೈಕಿ ಒಂದು ಪಂದ್ಯವನ್ನು ಗೆದ್ದುಕೊಂಡಿದ್ದರೇ, ಮತ್ತೊಂದು ಪಂದ್ಯದಲ್ಲಿ ಸೋಲುಂಡಿದೆ. ಈ ಸೋಲು ಗೆಲುವಿನ ಲೆಕ್ಕಾಚಾರ ಹೇಗಿದ್ದರೂ, ತಂಡದಲ್ಲಿ ಸ್ಟಾರ್ ಬೌಲರ್ ಅನ್ರಿಚ್, ಸ್ಟಾರ್ ಬ್ಯಾಟರ್ ಡೇವಿಡ್ ವಾರ್ನರ್, ತಂಡದಲ್ಲಿ ಇಲ್ಲದಿರುವ ಕೊರತೆ ಎದ್ದು ಕಾಣುತ್ತಿದೆ. ಇದು ತಂಡದ ಫಲಿತಾಂಶದ ಮೇಲೂ ಪರಿಣಾಮ ಬೀರುತ್ತಿರುವುದು ಕೂಡ ಸ್ಪಷ್ಟವಾಗುತ್ತಿದೆ.
ಈ ನಡುವೆ ಈ ಸ್ಟಾರ್ ಆಟಗಾರರು ಮುಂದಿನ ಪಂದ್ಯದಿಂದಲೇ ತಂಡದಲ್ಲಿ ಕಾಣಿಸಿಕೊಳ್ಳಿದ್ದಾರೆ ಎಂಬ ಸುದ್ದಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ತಿಳಿಸಿದೆ. ಇವರ ಜೊತೆಗೆ ಆಲ್ ರೌಂಡರ್ ಮಿಚೆಲ್ ಮಾರ್ಷ್ ಕೂಡ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೇರಿಕೊಳ್ಳಿದ್ದಾರೆ ಎಂದು ತಂಡದ ಹೆಡ್ ಕೋಚ್ ರಿಕಿ ಪಾಂಟಿಂಗ್ ಬಹಿರಂಗ ಪಡಿಸಿದ್ದಾರೆ.
ಡೆಲ್ಲಿ ತನ್ನ ಎರಡನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೆಣಸಿತ್ತು. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 14 ರನ್ ಗಳಿಂದ ಸೋಲುಂಡಿದೆ. ಈ ಪಂದ್ಯದ ಬಳಿಕ ಮಾತನಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೆಡ್ ಕೋಚ್ ರಿಕಿ ಪಾಂಟಿಂಗ್, ಅನ್ರಿಜ್ ಗಾಯದ ಸಮಸ್ಯೆಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಸದ್ಯ ಅವರು ನೆಟ್ಸ್ ಗಳಲ್ಲಿ ಪ್ರಾಕ್ಟೀಸ್ ಶುರು ಮಾಡಿದ್ದಾರೆ. ದಕ್ಷಿಣ ಆಫ್ರಿಕಾ ಕ್ರಿಕೆಟ್ ಬೋರ್ಡ್ ನಿಂದ ಕ್ಲಿಯರೆನ್ಸ್ ಸರ್ಟಿಫಿಕೆಟ್ ಪಡೆದ ತಕ್ಷಣ ಮೈದಾನಕ್ಕೆ ಇಳಿಯಲಿದ್ದಾರೆ. ಅವರು ಮುಂದಿನ ಪಂದ್ಯದಿಂದಲೇ ತಂಡದಲ್ಲಿ ಕಾಣಿಸಿಕೊಳ್ಳುವ ಅವಕಾಶಗಳಿವೆ ಎಂದು ಆಶಾಭಾವ ವ್ಯಕ್ತಪಡಿಸಿದ್ದಾರೆ.
ಇನ್ನು ಡೇವಿಡ್ ವಾರ್ನರ್ ಕೂಡ ಈಗಾಗಲೇ ತಂಡ ಸೇರಿಕೊಂಡಿದ್ದಾರೆ ಎಂದು ತಿಳಿಸಿದ ಪಾಂಟಿಂಗ್, ಕ್ವಾರಂಟೈನ್ ಮುಗಿದ ಬಳಿಕ ತಂಡವನ್ನು ಸೇರಿಕೊಳ್ಳಲಿದ್ದಾರೆ. ಅದೇ ರೀತಿ ಮಿಚೆಲ್ ಮಾರ್ಷ್ ಕೂಡ ಆಯ್ಕೆಗೆ ಲಭ್ಯವಾಗುತ್ತಾರೆ, ಕೆಕೆಆರ್ ವಿರುದ್ಧದ ಪಂದ್ಯದ ವೇಳೆಗೆ ತಂಡವನ್ನು ಸೇರಿಕೊಳ್ಳುವುದಾಗಿ ಪಾಂಟಿಂಗ್ ಹೇಳಿದ್ದಾರೆ.
ಇನ್ನು ದೆಹಲಿ ತನ್ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಏಪ್ರಿಲ್ 7 ರಂದು ಆಡಲಿದೆ. ಆ ಬಳಿಕ 10ರಂದು ಕೋಲ್ಕತ್ತಾ ತಂಡವನ್ನು ಎದುರಿಸಲಿದೆ.









