ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವೆಸ್ಟ್ ಇಂಡೀಸ್ ತಂಡವನ್ನು ಸೋಲಿನಿಂದ ವರುಣ ದೇವ ಬಚಾವ್ ಮಾಡ್ತಾನಾ ?

admin by admin
July 28, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ವೆಸ್ಟ್ ಇಂಡೀಸ್ ತಂಡವನ್ನು ಸೋಲಿನಿಂದ ವರುಣ ದೇವ ಬಚಾವ್ ಮಾಡ್ತಾನಾ ?

ಇಂಗ್ಲೆಂಡ್ ವಿರುದ್ಧದ ಸೋಲಿನಿಂದ ತಪ್ಪಿಸಿಕೊಳ್ಳಲು ವಿಂಡೀಸ್‍ಗೆ ವರುಣದೇವ ನೆರವಾಗುತ್ತಾನಾ ? ಓ ಮಳೆರಾಯ ನಮ್ಮನ್ನು ಸೋಲಿನಿಂದ ಬಚಾಚ್ ಮಾಡು ಅಂತ ವೆಸ್ಟ್ ಇಂಡೀಸ್ ಆಟಗಾರರು ದೇವ್ರ ಮೊರೆ ಹೋಗುತ್ತಿದ್ದಾರೆ.
ಹೌದು, ನಾಲ್ಕನೇ ದಿನ ವೆಸ್ಟ್ ಇಂಡೀಸ್ ಸೋಲಿನ ಭೀತಿಗೆ ಸಿಲುಕಿತ್ತು. ಮೂರನೇ ದಿನದ ಅಂತ್ಯಕ್ಕೆ ವೆಸ್ಟ್ ಇಂಡೀಸ್ ತನ್ನ ಎರಡನೇ ಇನಿಂಗ್ಸ್ ನಲ್ಲಿ 10 ರನ್‍ಗೆ ಎರಡು ವಿಕೆಟ್ ಕಳೆದುಕೊಂಡಿತ್ತು. ಇನ್ನೇನೂ ಇಂಗ್ಲೆಂಡ್ ಗೆದ್ದೇ ಬಿಡ್ತು ಅಂದುಕೊಂಡುವಷ್ಟರಲ್ಲಿ ನಾಲ್ಕನೇ ದಿನದ ಆಟ ಪೂರ್ತಿ ಮಳೆಗೆ ಆಹುತಿಯಾಯ್ತು. ಇದು ಇಂಗ್ಲೆಂಡ್ ಗೆಲುವಿಗೆ ಕಂಟಕವಾದ್ರೆ, ವೆಸ್ಟ್ ಇಂಡೀಸ್‍ಗೆ ಸೋಲಿನಿಂದ ತಪ್ಪಿಸಿಕೊಳ್ಳಲು ವರದಾನವಾಗಿತ್ತು.
ಆದ್ರೆ ಐದನೇ ಹಾಗೂ ಅಂತಿಮ ದಿನಕ್ಕೆ ವರುಣ ದೇವ ಕರುಣೆ ತೋರುತ್ತಾನಾ ಅನ್ನೋದನ್ನು ಕಾದು ನೋಡಬೇಕು. ಒಂದು ವೇಳೆ ಐದನೇ ದಿನ ಪಂದ್ಯ ನಡೆದ್ರೆ ವೆಸ್ಟ್ ಇಂಡೀಸ್ ವರುಣನ ಕೃಪೆಯಿಂದ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಲೇಬೇಕು. ಇಲ್ಲದಿದ್ರೆ ಸೋಲು ಖಚಿತ.
ಮೊದಲ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ವೆಸ್ಟ್ ಇಂಡೀಸ್ ಎರಡನೇ ಮತ್ತು ಮೂರನೇ ಟೆಸ್ಟ್ ಪಂದ್ಯದಲ್ಲಿ ಕಳಪೆ ಆಟವನ್ನಾಡಿತ್ತು. ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಗೆಲ್ಲಲು 399 ರನ್‍ಗಳ ಸವಾಲನ್ನು ಒಡ್ಡಿತ್ತು. ಆದ್ರೆ ಈಗ ವೆಸ್ಟ್ ಇಂಡೀಸ್ ಪಂದ್ಯವನ್ನು ಕನಿಷ್ಠ ಡ್ರಾ ಮಾಡಿಕೊಳ್ಳಲು ಅಡಬೇಕಿದೆ. ಈ ಮೂಲಕ ಸರಣಿಯನ್ನು ಸಮಗೊಳಿಸುವ ಅವಕಾಶವಿದೆ. ಇನ್ನೊಂದೆಡೆ ಇಂಗ್ಲೆಂಡ್ ತಂಡ ತನ್ನ ಗೆಲುವಿನ ಸರಣಿಯ ಓಟವನ್ನು ಮುಂದುವರಿಸಲು ಬೌಲರ್‍ಗಳ ಮೇಲೆ ಅವಲಂಬಿತವಾಗಿದೆ. ಈಗಾಗಲೇ ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್, ಕ್ರೀಸ್ ವೋಕ್ ಜೋಡಿ ವಿಂಡೀಸ್‍ಗೆ ಅಪಾಯದ ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ವೆಸ್ಟ್ ಇಂಡೀಸ್ ಬ್ಯಾಟ್ಸ್ ಮೆನ್‍ಗಳು ಕ್ರಿಸ್‍ಗೆ ಅಂಟಿಕೊಂಡು ಆಡಬೇಕು.
ಇಂಗ್ಲೆಂಡ್ ತಂಡ ಮೊದಲ ಇನಿಂಗ್ಸ್ ನಲ್ಲಿ ಮೊದಲ ಇನಿಂಗ್ಸ್ ನಲ್ಲಿ 369 ರನ್ ಗಳಿಸಿದ್ರೆ, ಎರಡನೇ ಇನಿಂಗ್ಸ್ ನಲ್ಲಿ ಎರಡು ವಿಕೆಟ್ ಕಳೆದುಕೊಂಡು 226 ರನ್‍ಗೆ ಡಿಕ್ಲೇರ್ ಮಾಡಿಕೊಂಡು ವೆಸ್ಟ್ ಇಂಡೀಸ್‍ಗೆ ಗೆಲ್ಲಲು 399 ರನ್‍ಗಳ ಗುರಿಯನ್ನು ನೀಡಿತ್ತು. ಹಾಗೇ ವೆಸ್ಟ್ ಇಂಡೀಸ್ ಮೊದಲ ಇನಿಂಗ್ಸ್ ನಲ್ಲಿ 197 ರನ್‍ಗೆ ಆಲೌಟ್ ಆಗಿ ಇನಿಂಗ್ಸ್ ಹಿನ್ನಡೆ ಅನುಭವಿಸಿತ್ತು. ಸದ್ಯ ಎರಡನೇ ಇನಿಂಗ್ಸ್ ನಲ್ಲಿ 10 ರನ್‍ಗೆ ಎರಡು ವಿಕೆಟ್‍ಗಳನ್ನು ಕಳೆದುಕೊಂಡಿದೆ.

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026
Tags: 3rd testEngland and West IndiesICCManchesterOld Traffordumpiresworld cricket
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram