night curfew ಎರಡು ದಿನವಲ್ಲ, ವಾರ ಪೂರ್ತಿ ಡೇ ಅಂಡ್ ನೈಟ್ ಕರ್ಫ್ಯೂ..!
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರಣಕೇಕೆಗೆ ಕಡಿವಾಣ ಹಾಕಲು ಸರ್ಕಾರ ಕೆಲ ಕಠಿಣ ನಿಮಯಗಳನ್ನು ಜಾರಿಗೆ ತಂದಿದೆ. ಅದರಂತೆ ಸೋಮವಾರದಿಂದ ಶುಕ್ರವಾರದ ವರೆಗೂ ನೈಟ್ ಕಫ್ರ್ಯೂ, ವಾರಾಂತ್ಯ ಕಫ್ರ್ಯೂ ಮತ್ತು ನಿಷೇಧಾಜ್ಞೆಯಂತಹ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ವಾರಾಂತ್ಯ ಕಫ್ರ್ಯೂ ಇದ್ದರೂ ಕೆಲವರು ಬೇಕಬಿಟ್ಟಿ ಓಡಾಡುತ್ತಿದ್ದಾರೆ. ಇದರಿಂದ ಸರ್ಕಾರ ಇನ್ನಷ್ಟು ಕಠಿಣ ನಿಯಮಗಳನ್ನ ತೆಗೆದುಕೊಳ್ಳಲು ಮುಂದಾಗಿದ್ದು, ವಾರ ಪೂರ್ತಿ ಕಫ್ರ್ಯೂ ಮಾಡುವ ಚಿಂತನೆ ಸರ್ಕಾರಕ್ಕೆ ಇದೆ ಎನ್ನಲಾಗಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ವೀಕೆಂಡ್ ಮಾತ್ರವಲ್ಲ ವಾರಪೂರ್ತಿ ಕಫ್ರ್ಯೂ ಹೇರಿದರೆ ಒಳ್ಳೆಯದು ಎಂದು ಎಲ್ಲರೂ ಹೇಳುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಮುಖ್ಯ ಕಾರ್ಯದರ್ಶಿಯವರ ಈ ಹೇಳಿಕೆಯನ್ನ ಗಮನಿಸಿದ್ರೆ ಸರ್ಕಾರ ಇನ್ನಷ್ಟು ಕಠಿಣ ನಿಯಮಗಳನ್ನು ಜಾರಿಗೆ ತರುವುದರಲ್ಲಿ ಡೌಟೇ ಇಲ್ಲ.










