ಮೊಟ್ಟೆ ಕೊಟ್ಟು ವಿದ್ಯಾ ದೇಗುಲಗಳನ್ನು ಮಿಲ್ಟ್ರಿ ಹೋಟೆಲ್ ಮಾಡಬೇಡಿ : ದಯಾನಂದ ಸ್ವಾಮೀಜಿ Dayananda Swamiji saaksha tv
ಧಾರವಾಡ : ರಾಜ್ಯ ಸರ್ಕಾರ ಮೊಟ್ಟೆಗೆ ಬದಲಾಗಿ ಅನೇಕ ಸಸ್ಯಹಾರಿ ಪೌಷ್ಟಿಕಾಂಶ ಪದಾರ್ಥಗಳಿವೆ, ಅವುಗಳನ್ನು ಮಕ್ಕಳಿಗೆ ನೀಡಬೇಕು. ಇಲ್ಲದಿದ್ದಲ್ಲಿ ಸಸ್ಯಾಹಾರಿ ಮಕ್ಕಳಿಗೆ ಪ್ರತ್ಯೇಕ ಶಾಲೆ ಮತ್ತು ನಾನ್ ವೆಜ್ ಶಾಲೆಗಳನ್ನು ತೆರೆಯಬೇಕು ಎಂದು ಅಖಿಲ ಭಾರತ ಸಸ್ಯಹಾರಿ ಒಕ್ಕೂಟದ ಪ್ರಧಾನ ಸಂಚಾಲಕರಾಗಿರುವ ದಯಾನಂದ ಸ್ವಾಮೀಜಿ ಒತ್ತಾಯಿಸಿದ್ದಾರೆ.
ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಬಗ್ಗೆ ರಾಜ್ಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಈ ವಿಚಾರವಾಗಿ ಅಖಿಲ ಭಾರತ ಸಸ್ಯಹಾರಿ ಒಕ್ಕೂಟವೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹಾಕುತ್ತಿದೆ.
ರಾಜ್ಯ ಬಿಜೆಪಿ ಸರ್ಕಾರವು ಸಸ್ಯಹಾರಿ ಧಾರ್ಮಿಯರ ಆಗ್ರಹಕ್ಕೆ ಸ್ಪಂದಿಸುತ್ತಿಲ್ಲ. ನಾಡಿನ ಪೂಜ್ಯರು, ಗಣ್ಯರೆಲ್ಲ ಬೇಡಿಕೊಂಡರೂ ಸರ್ಕಾರ ಕಿವುಡಾಗಿದೆ. ಸಸ್ಯಹಾರಿ ಧರ್ಮಿಯರ ಮಾತುಗಳಿಗೆ ಕಿಂಚಿತ್ತು ಬೆಲೆ ಕೊಡುತ್ತಿಲ್ಲ ಎಂದು ದಯಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ.
ಅಲ್ಲದೇ ಮೊಟ್ಟೆ ಕೊಟ್ಟು ವಿದ್ಯಾ ದೇಗುಲಗಳನ್ನು ಮಿಲ್ಟ್ರಿ ಹೋಟೆಲ್ ಮಾಡಬೇಡಿ ಎಂದು ಮನವಿ ಮಾಡಿಕೊಂಡಿರುವ ಅವರು, ಮೊಟ್ಟೆ ಬದಲಾಗಿ ಅನೇಕ ಸಸ್ಯಹಾರಿ ಪೌಷ್ಟಿಕಾಂಶ ಪದಾರ್ಥಗಳನ್ನು ಮಕ್ಕಳಿಗೆ ನೀಡಬೇಕು ಎಂದು ಒತ್ತಾಯಿಸಿದರು.
ಇನ್ನು ಸರ್ಕಾರ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ ಕೈ ಬಿಡಬೇಕು, ಇಲ್ಲದಿದ್ದಲ್ಲಿ ಸಸ್ಯಾಹಾರಿ ಮಕ್ಕಳಿಗೆ ಪ್ರತ್ಯೇಕ ಶಾಲೆ ಮತ್ತು ನಾನ್ ವೆಜ್ ಶಾಲೆಗಳನ್ನು ತೆರೆಯಬೇಕು ಎಂದು ಆಗ್ರಹಿಸಿದರು.