ಇಂದು ಖಾಸಗಿ ಬಸ್ ಗಳ ಒಕ್ಕೂಟ ಬಂದ್ ಗೆ ಕರೆ ನೀಡಲಾಗಿದ್ದು, ಹಲವು ಆಟೋ ಚಾಲಕರು ಜನರನ್ನು ಸುಲಿಗೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಬೆಳಗ್ಗೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಹತ್ತಿರ ಆಟೋಗೆ ಕಡಿಮೆ ದೂರದ ಪ್ರಯಾಣಕ್ಕೆ ಕೂಡ 600 ರೂ. ನಿಂದ 800 ರೂ. ವರೆಗೆ ದರ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆಸ್ಪತ್ರೆಗೆ ತೆರಳುವ ಪ್ರಯಾಣಿಕರ ಅನಿವಾರ್ಯತೆ ಗಮನಿಸಿ, ಹಣ ಪೀಕುವ ಕಾಯಕ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿರುವ ಹಿನ್ನೆಲೆ KSRTC ಬಸ್ ನಿಲ್ದಾಣದಲ್ಲಿಯೂ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಪ್ರಯಾಣಿಕರ ದಟ್ಟಣೆ ನೋಡಿಕೊಂಡು ಹೆಚ್ಚುವರಿ ಬಸ್ ಇಳಿಸಲು ಸಾರಿಗೆ ಸಂಸ್ಥೆ ಮುಂದಾಗಿದೆ.